ಕೇಂದ್ರ ಸರ್ಕಾರಕ್ಕೆ ಹೆದರಿಕೆ ಶುರು, ಲಕ್ಷ್ಮೀ ಹೆಬ್ಬಾಳ್ಕರ್

Screenshot_2023-09-06-21-30-22-98.jpg
Published on

ಬೆಳಗಾವಿ: ‘ಇಂಡಿಯಾ’ ಎಂದು ವಿರೋಧ ಪಕ್ಷಗಳ ಒಕ್ಕೂಟಕ್ಕೆ ಹೆಸರು ಇಟ್ಟುಕೊಂಡಿದ್ದಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹೆದರಿಕೆ ಶುರುವಾಗಿದೆ. ಪ್ರಧಾನಿ ಮೋದಿ ಅವರು ಕೂಡ ಇಷ್ಟಕ್ಕೆ ಹೆದರಿ ಬಿಟ್ಟಂತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
 ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಾರತ’ ಎಂಬ ಹೆಸರಿಗೆ ನಾವು ಯಾರೂ ವಿರೋಧ ಮಾಡಿಲ್ಲ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಂದು ನೋಟಿನ ಮೇಲೆ ಬರೆದಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎನ್ನುವ ಹೆಸರನ್ನೂ ಬದಲಾಯಿಸುತ್ತಾರಾ? ಇವರು ಏನೇನು ಬದಲಾಯಿಸುತ್ತಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡಲು ಕಾಂಗ್ರೆಸ್ ಹೋರಾಟ ಮಾಡಿದೆ.  ಭಾರತ ದೇಶ ಈ ಮಟ್ಟಕ್ಕೆ ಬೆಳೆಯಲು ಕಾಂಗ್ರೆಸ್ ತ್ಯಾಗ ಬಲಿದಾನವಿದೆ. ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ ಶಾಂತಿ ನೆಲೆಸಬೇಕು ಎಂದು ರಾಹುಲ್ ಗಾಂಧಿ ಭಾರತ ಜೋಡೋ ಯಾತ್ರೆ ಮಾಡಿದರು. ಭಾರತ ಜೋಡೋ ಯಾತ್ರೆಗೆ ಈಗ ಒಂದು ವರ್ಷವಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net