ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್ ಯೋಜನೆಯಡಿ ಪಡಿತರದಾರರಿಗೆ ಆಹಾರ ಧಾನ್ಯ ವಿತರಣೆ

Yalaburga Ration Distribute
Published on

ಯಲಬುರ್ಗಾ: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್ ಯೋಜನೆಯಡಿ ಪಡಿತರದಾರರಿಗೆ ಉಚಿತ ಆಹಾರ ಧಾನ್ಯ ವಿತರಿಸಲಾಗುತ್ತಿದೆ ಎಂದು ಆಹಾರ ಇಲಾಖೆ ಶಿರಸ್ತೇದಾರ್ ಮಲ್ಲಿಕಾರ್ಜುನ ಶಾಸ್ತ್ರೀಮಠ ಹೇಳಿದರು.

ತಾಲೂಕಿನ ಮುಧೋಳ ಮತ್ತು ಹಿರೇಮ್ಯಾಗೇರಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯ ವಿತರಣೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಆಹಾರ ಧಾನ್ಯ ಪಡಿಯಬೇಕು. ಕೇಂದ್ರ ಸರ್ಕಾರದಿಂದ ಮೇ ಮತ್ತು ಜೂನ್ ತಿಂಗಳ ಆಹಾರ ಧಾನ್ಯ ಪೂರೈಕೆ ಮಾಡಲು ಪ್ರಾರಂಭವಾಗಿದೆ. ಪಡಿತರದಾರರ ಕುಟುಂಬದ ಪ್ರತಿ ಸದಸ್ಯನಿಗೆ 5 ಕೆ.ಜಿ. ಅಕ್ಕಿ, ಒಂದು ಕೆ.ಜಿ ಬೇಳೆ ವಿತರಿಸಲಾಗುತ್ತಿದೆ. ಕುಕನೂರು ಹಾಗೂ ಯಲಬುರ್ಗಾ ತಾಲೂಕುಗಳ 117 ನ್ಯಾಯಬೆಲೆ ಅಂಗಡಿಗಳಲ್ಲಿ 61 ಸಾವಿರಕ್ಕೂ ಅಧಿಕ ಕಾರ್ಡ್‌ದಾರರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು. ನ್ಯಾಯ ಬೆಲೆ ವಿತರಕರ ಸಂಘದ ಅಧ್ಯಕ್ಷ ಛತ್ರಪ್ಪ ಛಲವಾದಿ, ಆಹಾರ ನಿರೀಕ್ಷಕ ರೆಹಮನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net