ಬಸ್ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ಕಾರಣ

minister santhosh lad
ಕಾರ್ಮಿಕ ಸಚಿವ ಸಂತೋಷ್ ಲಾಡ್
Published on

ಶಿವಮೊಗ್ಗ: ಕೇಂದ ಸರ್ಕಾರ ಇಂಧನ ಬೆಲೆ ಏರಿಸಿದ್ದರಿಂದಲೇ ರಾಜ್ಯ ಸರ್ಕಾರ ಬಸ್ ಪಯಾಣ ದರ ಹೆಚ್ಚಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ರಾಜ್ಯದಲ್ಲಿ 20 ಸಾವಿರ ಸರ್ಕಾರಿ ಬಸ್‌ಗಳು ಸಂಚರಿಸುತ್ತಿವೆ. ಶಕ್ತಿ ಯೋಜನೆ ಜಾರಿಗೆ ಬಂದ ಮೇಲೆ ಪ್ರಯಾಣಿಕ ಸಂಖ್ಯೆ ದುಪ್ಪಟ್ಟಾಗಿದೆ. 8 ಸಾವಿರ ಜನರಿಗೆ ಉದ್ಯೋಗ ಸೃಷ್ಟಿಯಾಗಿದೆ. ಈ ಎಲ್ಲ ಖರ್ಚು ಭರಿಸಲು ಐದು ವರ್ಷಗಳ ಬಳಿಕ ಶೇ.15ರಷ್ಟು ಪಯಾಣ ದರ ಏರಿಸಲಾಗಿದೆ ಎಂದರು..

ಸಾರಿಗೆ ವ್ಯವಸ್ಥೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಆದರೂ ಬಿಜೆಪಿಯವರು ಬಾಯಿ ಬಡಿದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. ಗುಜರಾತ್‌ಗೆ 50 ಸಾವಿರ ಕೋಟಿ ರೂ. ಸಬ್ಸಿಡಿ ನೀಡಲಾಗಿದೆ. ಅಷ್ಟಾದರೂ ಗುಜರಾತ್ ಇಂದು ಅಭಿವೃದ್ಧಿಯಲ್ಲಿ ಯಾವ ಸ್ಥಾನದಲ್ಲಿದೆ ಎಂದು ನೋಡಬೇಕಿದೆ. ಅಲ್ಲಿ ನಡೆಯುವಷ್ಟು ಅಪರಾಧ ಪ್ರಕರಣ ಬೇರೆಲ್ಲೂ ನಡೆಯುತ್ತಿಲ್ಲ ಎಂದರು.

ಸಂಕ್ರಾಂತಿ ಬಳಿಕ ಪಿಎಂ ಬದಲು!

ಶಿವಮೊಗ್ಗ: ಸಂಕ್ರಾಂತಿ ಬಳಿಕ ಪ್ರಧಾನಿ ಬದಲಾಗಲಿದ್ದಾರೆ ಎಂದು ಸಂತೋಷ್ ಲಾಡ್ ಹೇಳಿದರು. ಬಿಜೆಪಿಯವರು ಸಂಕ್ರಾಂತಿ ಬಳಿಕ ಸಿಎಂ ಸಿದ್ದರಾಮಯ್ಯ ಬದಲಾಗುತ್ತಾರೆಂದು ಹೇಳುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಬದಲಾವಣೆ ಇಲ್ಲ. ಅದನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಸಿಎಂ ಬದಲಾವಣೆ ಊಹಾಪೋಹವಷ್ಟೇ ಎಂದು ಹೇಳಿದರು. ಇದೇ ವೇಳೆ ಸಂಪುಟ ಬದಲಾವಣೆ ಬಗ್ಗೆ ಸಿಎಂ, ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಪಕ್ಷ ನನಗೆ ಕೊಟ್ಟಿರುವ ಜವಾಬ್ದಾರಿ ಬಗ್ಗೆ ತೃಪ್ತಿ ಇದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net