

ಮೈಸೂರು: ‘ಅಯೋಧ್ಯಾ ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯಬಹುದು’ ಎಂಬ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಬ್ರಹ್ಮಶ್ರೀ ನಾರಾಯಣಗುರು ಪ್ರಚಾರ ಸಂಘಗಳ ಒಕ್ಕೂಟದ ಮುಖ್ಯಸ್ಥ ಮುರಳೀಧರ್ ಆಗ್ರಹಿಸಿದರು.
ಅಂದು ರಾಮರಾಜ್ಯ ಬದಲು ರಾವಣ ರಾಜ್ಯವನ್ನಾಗಿಸಬಹುದಾದ ಎಲ್ಲ ಸಾಧ್ಯತೆ ಇದೆ. ಹೀಗಾಗಿ ಬಿ.ಕೆ.ಹರಿಪ್ರಸಾದ್ ಅವರ ಎಚ್ಚರಿಕೆಯನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಆದ್ದರಿಂದ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸಲಹೆ ನೀಡಿದರು.