ಕೇಂದ್ರ ಸರ್ಕಾರದ ತೆರಿಗೆ ಕಡಿತ: ಮೊಳಕಾಲ್ಮೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

mlk Sambrama
Published on

ಮೊಳಕಾಲ್ಮೂರು: ಕೇಂದ್ರ ಸರ್ಕಾರವು ಅಗತ್ಯ ವಸ್ತುಗಳು ಮತ್ತು ಸೇವೆಗಳ ಮೇಲೆ ತೆರಿಗೆ ಕಡಿತಗೊಳಿಸುವ ನಿರ್ಧಾರ ಪ್ರಕಟಿಸಿದ ಹಿನ್ನೆಲೆಯಲ್ಲಿ, ಮೊಳಕಾಲ್ಮೂರಿನ ಬಿಜೆಪಿ ಕಾರ್ಯಕರ್ತರು ಪಟ್ಟಣದ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಡಾ. ಪಿ.ಎಂ. ಮಂಜುನಾಥ, "ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಸಮಾಜದ ಎಲ್ಲ ವರ್ಗದ ಜನರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ. ಇದು ಜನಪರ ಆಡಳಿತದ ಒಂದು ಉತ್ತಮ ಉದಾಹರಣೆ" ಎಂದು ಹೇಳಿದರು.

ಕೇಂದ್ರ ಸರ್ಕಾರದ ಈ ಕ್ರಮವು ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ಮಧ್ಯಮ ವರ್ಗದವರಿಗೆ ನೇರವಾಗಿ ಲಾಭ ತರಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂಭ್ರಮಾಚರಣೆಯಲ್ಲಿ ಮಂಡಲ ಅಧ್ಯಕ್ಷ ರಾಮರಡ್ಡಿ, ಹಾಗೂ ಕಾರ್ಯಕರ್ತರಾದ ರವಿಕುಮಾರ, ಸಿದ್ದಾರ್ಥ, ಪಿ. ಲಕ್ಷ್ಮಣ, ತಿಪ್ಪೇಸ್ವಾಮಿ, ಕೇಶವಮೂರ್ತಿ, ಹೇಮಂತಕುಮಾರ, ಹರೀಶ, ಮಂಜುನಾಥ, ನಾಗರಾಜ, ಬಿ. ಮಹೇಶ, ಸಂಜೀವಮೂರ್ತಿ, ನಾರಾಯಣರಡ್ಡಿ, ಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net