

ಕೋಟ: ಕಾಶ್ಮೀರದ ಪೆಹಲ್ಗಾಮ್ನಲ್ಲಿ ಭಯೋತ್ಪಾದಕರು ನಡೆಸಿದ ನರಮೇಧ ಹಾಗೂ ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಚೇರಿಯಿಂದ ಸಾಲಿಗ್ರಾಮ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.
ಪ್ರತಿಭಟನಾ ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಕೇಂದ್ರ ಸರ್ಕಾರ ವೈಫಲ್ಯದ ಈ ರೀತಿಯ ಘಟನೆಗಳು ಆಗಾಗ ಮರುಕಳಿಸುತ್ತಿದೆ. ಪೆಹಲ್ಗಾಮ್ ಭಯೋತ್ಪಾದಕರ ದಾಳಿ ಯಾವುದೇ ಒಂದು ಧರ್ಮದ ಮೇಲೆ ನಡೆದ ದಾಳಿಯಲ್ಲ ಬದಲಾಗಿ ಇಡೀ ಭಾರತೀಯರ ಮೇಲಾದ ದಾಳಿಯಾಗಿದೆ. ದೇಶದ ರಕ್ಷಣಾ ಹಾಗೂ ಗೃಹ ವ್ಯವಸ್ಥೆ ಸಂಪೂರ್ಣ ವೈಫಲ್ಯಗೊಂಡಿದೆ ಎಂಬುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ. ಕುಂದರ್ ಪ್ರಸ್ತಾವಿಕವಾಗಿ ಮಾತನಾಡಿದರು. ಉಗ್ರರ ದಾಳಿನಲ್ಲಿ ಮೃತಪಟ್ಟ ವ್ಯಕ್ತಿಗಳಿಗೆ ಸಂತಾಪ ಸಭೆ ನಡೆಯಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು
ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಲ್ಕೆಬೈಲು, ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತರ್ಥ ಶೆಟ್ಟಿ, ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷೆ ರೋಷನಿ ಒಲೆವೆರಾ, ಉಡುಪಿ ಜಿಲ್ಲಾ ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ತಿಮ್ಮ ಪೂಜಾರಿ ಗಿಳಿಯಾರ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಕಿಶೋರ್ ಶೆಟ್ಟಿ ಮೈರ್ ಕೊಮೆ, ಕೋಟ ಬ್ಲಾಕ್ ಕಾಂಗ್ರೆಸ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಖಾ ಪಿ.ಸುವರ್ಣ, ಉಡುಪಿ ಜಿಲ್ಲಾ ಹಿಂದುಳಿದ ಘಟಕದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಕೋಟ, ಕುಂದಾಪುರ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸದಸ್ಯರಾದ ರಾಜೇಶ್ ಕೆ.ನೆಲ್ಲಿಬೆಟ್ಟು, ಬ್ಲಾಕ್ ಕಾಂಗ್ರೆಸ್ ಇಂಟಕ್ ಅಧ್ಯಕ್ಷರಾದ ದೇವೇಂದ್ರ ಗಾಣಿಗ ಕೋಟ, ಸಾಲಿಗ್ರಾಮ ಪಪಂ ಸದಸ್ಯರಾದ ರವೀಂದ್ರ ಕಾಮತ್ ಗುಂಡ್ಮಿ, ವಡ್ಡರ್ಸೆ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರ ಶೆಟ್ಟಿ ವಡ್ಡರ್ಸೆ, ಕೋಟ ಗ್ರಾಪಂ ಸದಸ್ಯರಾದ ಭುಜಂಗ ಗುರಿಕಾರ ಮಣ್ಣೂರ್, ಐರೋಡಿ ಗ್ರಾಪಂ ಸದಸ್ಯರಾದ ಸುಧಾಕರ್ ಪೂಜಾರಿ, ಪಾಂಡೇಶ್ವರ ಗ್ರಾಪಂ ಸದಸ್ಯರಾದ ಚಂದ್ರ ಮೋಹನ್ ಸಾಸ್ತಾನ ಮತ್ತಿತರರು ಉಪಸ್ಥಿತರಿದ್ದರು. ಗಣೇಶ್ ಕೆ.ನೆಲ್ಲಿಬೆಟ್ಟು ಸ್ವಾಗತಿಸಿ, ಕೋಟ ಗ್ರಾಪಂ ಸದಸ್ಯ ಚಂದ್ರ ಆಚಾರ್ ಕಾರ್ಯಕ್ರಮ ನಿರೂಪಿಸಿದರು.