

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಕಲಬುರ್ಗಿ ನಗರದ ಜಿಲ್ಲಾ ಖಿಲಾ ಮೈದಾನದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ದರ್ಶನ ಪಡೆದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವ ಭಗವಂತ ಕೋಬಾ ಅವರು ಸಮಿತಿಯವರಿಂದ ಸನ್ಮಾನ ಸ್ವೀಕರಿಸಿದರು.
ನಂತರ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಿ ಮಕ್ಕಳಿಗೆ ಪ್ರೋತ್ಸಾಹಿಸಿ ಅಭಿನಂದಿಸಿದರು.
ಬಿಜೆಪಿಯ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಬಿನ್ನಾಡಿ, ಆರ್.ಎಸ್.ಎಸ್ ವಿಭಾಗೀಯ ಪ್ರಚಾರಕ ವಿಜಯ್ ಮಾಂತೇಶ್, ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ನಾಗೇಂದ್ರ ಕಬಾಡಿ, ಬಿಜೆಪಿ ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವ ಬೆಳಮಗಿ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಟಗಿ, ಕಾರ್ಯಕಾರಿಣಿ ಸದಸ್ಯರಾದ ಪ್ರೀತಂ ಪಾಟೀಲ್, ಗೋಪಾಲ್ ಸರಡಗಿ, ಕಾರ್ಯದರ್ಶಿ ನಾರಾಯಣ ಜಹಗಿರದಾರ್, ಶರಣು ಸಜ್ಜನ್ ಶೆಟ್ಟಿ, ಅಣವೀರ್ ಪಾಟೀಲ್, ಸೇರಿದಂತೆ ಹಿಂದು ಮಹಾಗಣಪತಿ ಉತ್ಸವ ಮಂಡಳಿಯ ಪದಾಧಿಕಾರಿಗಳು, ಗುರು ಹಿರಿಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.