ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ

TOLANAKERE
Published on

ಹುಬ್ಬಳ್ಳಿ: ನಾವೆಲ್ಲ ಇಂಗ್ಲಿಷ್ ವ್ಯಾಮೋಹ ಬಿಟ್ಟು ನಮ್ಮ ದೇಶ, ಭಾಷೆ, ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಮೊದಲಿಗೆ ವಸಾಹತುಶಾಹಿ ಮನಸ್ಥಿತಿಗಳು ಬದಲಾಗಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹುಬ್ಬಳ್ಳಿಯ ತೋಳನಕೆರೆ ಉದ್ಯಾನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹು-ಧಾ ಮಹಾನಗರ ಪಾಲಿಕೆ ವತಿಯಿಂದ ಶನಿವಾರ ಆಯೋಜಿಸಿದ್ದ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನೀರು, ಮಣ್ಣು, ಪರಿಸರಕ್ಕೆ ದೈವತ್ವದ ಸ್ಥಾನ ಕೊಟ್ಟ ಶ್ರೇಷ್ಠ ಪರಂಪರೆ ನಮ್ಮದು. ಇವುಗಳ ಸಂರಕ್ಷಣೆ ಉದ್ದೇಶದಿಂದ ನನ್ನ ಮಣ್ಣು ನನ್ನ ದೇಶ ಅಭಿಯಾನ ನಡೆಸಲಾಗುತ್ತಿದೆ ಎಂದರು.

ಮೇಯರ್ ವೀಣಾ ಬರದ್ವಾಡ, ಉಪ ಮೇಯರ್ ಸತೀಶ ಹಾನಗಲ್ಲ, ವಿರೋಧ ಪಕ್ಷದ ನಾಯಕಿ ಸುವರ್ಣ ಕಲ್ಲಕುಂಟ್ಲ, ಪಾಲಿಕೆ ಸದಸ್ಯರಾದ ರಾಮಪ್ಪ ಬಡಿಗೇರ, ಶಿವು ಹಿರೇಮಠ, ಚಂದ್ರಿಕಾ ಮೇಸ್ತ್ರಿ, ಸಂತೋಷ ಚವ್ಹಾಣ, ತಿಪ್ಪಣ್ಣ ಮಜ್ಜಗಿ, ಉಮೇಶಗೌಡ ಕೌಜಗೇರಿ, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಉಪ ಆಯುಕ್ತ ಆನಂದ ಕಲ್ಲೊಳ್ಳಿಕರ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net