ಜೋಶಿ ನಿವಾಸಕ್ಕೆ ಸಚಿವ ಮೇಘವಾಲ್ ಭೇಟಿ

arjunram visit
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನರಾಮ್ ಮೇಘವಾಲ್ ಅವರು ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದರು.

ಸಚಿವರನ್ನು ಜೋಶಿ ಆದರದಿಂದ ಬರಮಾಡಿಕೊಂಡರು. ಚುನಾವಣೆ ಸಿದ್ಧತೆ, ಪ್ರಚಾರ, ಜನರ ಅಭಿಮತ, ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಅಮಿತ್ ಶಾ ಅವರು ನಡೆಸಿದ ಪ್ರಚಾರ ಸಭೆಗಳಲ್ಲಿ ಕಂಡುಬಂದ ಜನ ಬೆಂಬಲ ಕುರಿತು ಪರಸ್ಪರ ಅಭಿಪ್ರಾಯ ಹಂಚಿಕೊಂಡರು.

ಮಾಜಿ ಸಚಿವ, ಉದ್ಯಮಿ ಮುರುಗೇಶ ನಿರಾಣಿ ಜತೆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net