ಗಂಗೊಳ್ಳಿಗೆ ಕೇಂದ್ರ ಅಧಿಕಾರಿಗಳ ತಂಡ ಭೇಟಿ

gan
Published on

ವಿಜಯವಾಣಿ ಸುದ್ದಿಜಾಲ ಕುಂದಾಪುರ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರ ಕ್ಷಯರೋಗ ವಿಭಾಗದ ಮುಖ್ಯ ಸಹಾಯಕ ನಿರ್ದೇಶಕ ಡಾ.ರಘುರಾಂ ರಾವ್, ತಾಂತ್ರಿಕ ಅಧಿಕಾರಿ ಶಶಾಂಕ್ ಮಾಳವಿಯ, ವಿಶ್ವ ಆರೋಗ್ಯ ಸಂಸ್ಥೆಯ ರಾಷ್ಟ್ರೀಯ ಸಲಹೆಗಾರ ಡಾ.ಮ್ರಿಜೆನ್ ದೆಖ, ಕೆಎಚ್‌ಪಿಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಎಚ್.ಎಲ್‌ರವರು ಗಂಗೊಳ್ಳಿಗೆ ಶುಕ್ರವಾರ ಭೇಟಿ ನೀಡಿದರು.

ಗಂಗೊಳ್ಳಿಯ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯಿತಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಆಯೋಜಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮ ವೀಕ್ಷಿಸಿದ ಅಧಿಕಾರಿಗಳು, ನೈರ್ಮಲ್ಯ, ಸಮಗ್ರ ಆರೋಗ್ಯ, ಉಪಶಾಮಕ ಆರೈಕೆ, ಪಂಚಾಯಿತಿಯ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.

ಡಾ.ಸ್ವರೂಪ್, ಅನ್ನಾ ಫರ್ನಾಂಡಿಸ್, ಗಂಗೊಳ್ಳಿ ಗ್ರಾಮ ಪಂಚಾಯಿತಿಯ ಲೆಕ್ಕಸಹಾಯಕ ಶೇಖರ ಜಿ., ನಾರಾಯಣ ಶ್ಯಾನುಭಾಗ್, ಆರೋಗ್ಯ ಸಹಾಯಕಿ ಪ್ರಜ್ವಲಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿ ಉಪಸ್ಥಿತರಿದ್ದರು.

ಕ್ಷಯರೋಗ ಚಿಕಿತ್ಸೆ ಬಗ್ಗೆ ಮಾಹಿತಿ

ಕ್ಷಯರೋಗ, ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸಾ ವಿಧಾನಗಳ ಬಗ್ಗೆ ಮತ್ತು ಕ್ಷಯರೋಗ ಮುಕ್ತ ಗ್ರಾಮದ ಬಗ್ಗೆ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಎಚ್‌ಒ ನಯನಾ, ಆಶಾ ಕಾರ್ಯಕರ್ತೆ ಕಲ್ಪನಾ ಮಾಹಿತಿ ನೀಡಿದರು. ಬಳಿಕ ಮೀನುಗಾರರಿಗೆ, ವಲಸೆ ಕಾರ್ಮಿಕರಿಗೆ ಕ್ಷಯರೋಗ ಸಹಿತ ಆರೋಗ್ಯ ತಪಾಸಣೆ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net