ಕೇಂದ್ರ ಬಿಜೆಪಿಯದು ಭ್ರಷ್ಟಾಚಾರರಹಿತ ಆಡಳಿತ

hnl bjp
Published on

ಹೊನ್ನಾಳಿ: ಕಳೆದ 9 ವರ್ಷದಲ್ಲಿ ಒಂದೇ ಒಂದು ಹಗರಣಗಳಿಲ್ಲದೆ ಭ್ರಷ್ಟಾಚಾರ ರಹಿತ ಆಡಳಿತ ನಡೆಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಕೇಂದ್ರ ಸರ್ಕಾರದ 9ನೇ ವರ್ಷದ ಸಾಧನೆ ಮತ್ತು ಮಹಾ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಅವರು ಮಾತನಾಡಿದರು.

ಯುಪಿಎ ಸರ್ಕಾರ ಇದ್ದಾಗ ದೇಶವನ್ನೇ ಕೊಳ್ಳೆ ಹೊಡೆಯುವಷ್ಟು ಭ್ರಷ್ಟಾಚಾರ ನಡೆಸಿತ್ತು. ಜಾತ್ಯತೀತ ಹೆಸರಿನಲ್ಲಿ ಆಡಳಿತಕ್ಕೆ ಬಂದ ಯುಪಿಎ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಿ ಹಿಂದೂಗಳಲ್ಲಿ ಭಯ ಹುಟ್ಟಿಸುವ ರೀತಿ ಆಡಳಿತ ನಡೆಸಿತ್ತು. ಆದರೆ, ಮೋದಿಯವರು ಇಡೀ ದೇಶವೇ ಮೆಚ್ಚುವ ರೀತಿ ಆಡಳಿತ ನಡೆಸಿದ್ದಾರೆ ಎಂದರು.

ಜಿಪಂ ಮಾಜಿ ಉಪಾಧ್ಯಕ್ಷ ಸುರೇಂದ್ರನಾಯ್ಕ, ಜಿಲ್ಲಾ ಕಾರ್ಯದರ್ಶಿ ಅರಕೆರೆ ನಾಗರಾಜು, ಎಸ್ಸಿ ಮೋರ್ಚಾ ಅಧ್ಯಕ್ಷ ಉಮೇಶ್, ಮುಖಂಡರಾದ ಸಿದ್ದಪ್ಪ, ಪ್ರವೀಣ್, ಚಂದ್ರು ಮಾಡೇರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net