

ರಾಣೆಬೆನ್ನೂರ: ಲೋಕಸಭೆಯ ಮೊದಲ ದಿನದ ಅಧಿವೇಶನದಲ್ಲಿ ಐತಿಹಾಸಿಕ ನಾರಿಶಕ್ತಿ ವಂದನಾ ಅಧಿನಿಯಮ (ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ) ಮಸೂದೆ ಮಂಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ನಗರ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಬುಧವಾರ ಪಕ್ಷದ ಕಚೇರಿಯಲ್ಲಿ ಸಂಭ್ರಮ ಆಚರಿಸಿದರು.
ಜಿಪಂ ಮಾಜಿ ಸದಸ್ಯೆ ಮಂಗಳಗೌರಿ ಪೂಜಾರ ಮಾತನಾಡಿ, ನಾರಿಶಕ್ತಿ ವಂದನಾ ಅಧಿನಿಯಮ ಜಾರಿಗೆ ತರಲು ನಿರ್ಧರಿಸಿದ ಪ್ರಧಾನಿ ನರೇಂದ್ರ ಮೋದಿ ಇಚ್ಛಾಶಕ್ತಿ ಸಮಸ್ತ ಸ್ತ್ರೀ ಕುಲದ ಆತ್ಮವಿಶ್ವಾಸ ಹೆಚ್ಚಿಸಿದೆ. ಇದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸಶಕ್ತಗೊಳಿಸುತ್ತದೆ. ಪುರುಷ ಪ್ರಧಾನ ಸಮಾಜದಲ್ಲಿ ಪದೇ ಪದೆ ಅವಕಾಶದಿಂದ ವಂಚಿತರಾಗುತ್ತಿದ್ದ ಮಹಿಳೆಯರಿಗೆ ನೂತನ ಮಸೂದೆ ಒಂದು ವರದಾನವಾಗಿದೆ. ಮಹಿಳೆಯರು ಇದನ್ನು ಸಮರ್ಪಕವಾಗಿ ಬಳಸಿಕೊಂಡು ಸಂಸದೀಯ ವ್ಯವಸ್ಥೆಯಲ್ಲಿ ತಮ್ಮ ಹೆಗ್ಗುರುತು ಮೂಡಿಸುವಂತಾಗಬೇಕು ಎಂದರು.
ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರೂಪಾ ಬಾಕಳೆ, ನಗರ ಅಧ್ಯಕ್ಷ ದೀಪಕ ಹರಪನಹಳ್ಳಿ, ಉಪಾಧ್ಯಕ್ಷ ಅಮೋಘ ಬಾದಾಮಿ ನಾಗರಾಜ ಬಣಕಾರ, ನೀಲಾಂಬಿಕ ನಿಡಗುಂದಿ, ಸುಜಾತಾ ಆರಾಧ್ಯಮಠ ಮತ್ತು ಮಹಿಳಾ ಮೋರ್ಚಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.