ಕೇಂದ್ರದ ಯೋಜನೆ ಜಾಗೃತಿ ಅಗತ್ಯ

4Manju10-Web
ಬೆಳಗಾವಿ ತಾಲೂಕಿನ ಶಿಂಧೊಳ್ಳಿ, ಹೊನ್ನಿಹಾಳ, ಮಾರಿಹಾಳ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಹಾಂತೇಶ ಕವಟಗಿಮಠ ಮಾತನಾಡಿದರು. ಸಂಜಯ ಪಾಟೀಲ, ಯುವರಾಜ ಜಾಧವ, ಧನಂಜಯ ಜಾಧವ ಇತರರಿದ್ದರು.
Published on

ಬೆಳಗಾವಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಂಭತ್ತು ವರ್ಷಗಳ ಅವಯಲ್ಲಿ ಜಾರಿಗೆ ತಂದಿರುವ ಯೋಜನೆಗಳು, ಅಭಿವೃದ್ಧಿ ಕಾಮಗಾರಿಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ತಾಲೂಕಿನ ಶಿಂಧೊಳ್ಳಿ, ಹೊನ್ನಿಹಾಳ, ಮಾರಿಹಾಳ ಗ್ರಾಮಗಳಿಗೆ ಸೋಮವಾರ ಭೇಟಿ ನೀಡಿ 2ನೇ ಅವಗೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷ, ಉಪಾಧ್ಯಕ್ಷರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯುವರಾಜ ಜಾಧವ, ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಧನಂಜಯ ಜಾಧವ, ಜಿಲ್ಲಾ ಬಿಜೆಪಿ ಕೋಶಾಧ್ಯಕ್ಷ ಮಲ್ಲಿಕಾರ್ಜುನ ಮಾಡಮ್ಮನವರ, ಬಸವ ಸಮಿತಿ ಅಧ್ಯಕ್ಷ ಸಿ.ಆರ್. ಪಾಟೀಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net