

ಕಡಬ: ಕಾಣಿಯೂರು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಪೂರ್ವಭಾವಿ ಸಭೆ ಸಂಘದ ಪ್ರಧಾನ ಕಚೇರಿ ಕಾಣಿಯೂರಿನಲ್ಲಿ ನಡೆಯಿತು.
ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ ಮಾತನಾಡಿ, ಹಿರಿಯರ ಸತತ ಪರಿಶ್ರಮದಿಂದ ಚಾರ್ವಾಕ ಪ್ರಾಥಮಿಕ ಸಹಕಾರ ಸಂಘ ಸ್ಥಾಪನೆಗೊಂಡಿದ್ದು, ಇದೀಗ ಸಂಘ ಶತಮಾನದ ಸಂಭ್ರಮದಲ್ಲಿದೆ. ಸಂಘದ ಅಭಿವೃದ್ಧಿಗಾಗಿ ದುಡಿದ ಹಿರಿಯರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಶತಮಾನೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಹಲವಾರು ಯೋಜನೆ, ಯೋಚನೆಗಳನ್ನು ಹಾಕಿಕೊಂಡಿದ್ದು, ಇದಕ್ಕೆ ಪೂರಕವಾಗಿ ಸಂಘಕ್ಕೆ ನೂತನ ಕಚೇರಿ ಕಟ್ಟಡ ಹಾಗೂ ಗೋದಾಮು ನಿರ್ಮಾಣವನ್ನು ಅಂದಾಜು 2 ಕೋಟಿ ರೂ. ವೆಚ್ಚದಲ್ಲಿ ಮಾಡಿ ಲೋಕಾರ್ಪಣೆ ಮಾಡಲು ಈಗಾಗಲೇ ಪ್ಲಾನ್ ಹಾಗೂ ಎಸ್ಟಿಮೇಟ್ ಮಾಡಿ ಸರ್ಕಾರದಿಂದ ಅನುಮತಿ ಪಡೆಯಲಾಗಿದೆ. ವಿವಿಧ ತರಬೇತಿ ಕಾರ್ಯಕ್ರಮ, ವೈದ್ಯಕೀಯ ಶಿಬಿರ, ಕೃಷಿ ಮೇಳ, ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ದೈಪಿಲ ಸೇವಾ ಪ್ರತಿಷ್ಠಾಪನ ಅಧ್ಯಕ್ಷರಾದ ಪ್ರದೀಪ್ ಆರ್ ಗೌಡ ಅರುವಗುತ್ತು, ಒಕ್ಕಲಿಗ ಗೌಡ ಸಮುದಾಯ ಸಹಕಾರ ಸಂಘದ ಉಪಾಧ್ಯಕ್ಷ ಯು.ಪಿ ರಾಮಕೃಷ್ಣ , ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ನಾಗೇಶ್ ರೈ ಮಾಳ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಬಾಲಕೃಷ್ಣ ರೈ ಕಾಸ್ಪಾಡಿಗುತ್ತು, ಸದಸ್ಯರಾದ ಹೊನ್ನಪ್ಪ ಗೌಡ ಕಟ್ಟ ಮತ್ತು ಧರ್ಮಪಾಲ ರೈ ಪಿಜಕಳ ಸಲಹೆ ಸೂಚನೆ ನೀಡಿದರು.
ಕಾಣಿಯೂರು ಶ್ರೀ ಮಠದ ವ್ಯವಸ್ಥಾಪಕ ನಿರಂಜನ ಆಚಾರ್, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಕಾಣಿಯೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಕೊಪ್ಪ, ನಿಕಟ ಪೂರ್ವ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಪುತ್ತೂರು ಪಿಎಲ್ಡಿ ಬ್ಯಾಂಕ್ ನಿರ್ದೇಶಕ ದೇವಯ್ಯ ಖಂಡಿಗ ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡ ಸ್ವಾಗತಿಸಿ, ಅಧ್ಯಕ್ಷ ಗಣೇಶ್‌ಉದನಡ್ಕ ವಂದಿಸಿದರು.