ಬಾಲ್ಯದಲ್ಲಿಯೆ ಮಕ್ಕಳ ಬೆಳವಣಿಗೆಗೆ ಪೂರಕ ಪೌಷ್ಠಿಕ ಆಹಾರ ಅವಶ್ಯಕ : ಜಿಪಂ ಸಿಇಒ ರಾಹುಲ್ ಶಿಂಧೆ

IMG-20241025-WA0035.jpg
Published on

ಬೆಳಗಾವಿ : ವಿಶ್ವ ಆರೋಗ್ಯ ಸಂಸ್ಥೆ ಮತ್ತು ಆರೋಗ್ಯ ಇಲಾಖೆ ವರದಿಯ ಪ್ರಕಾರ ಮಕ್ಕಳ ಮೆದಳು ಮತ್ತು ಬೌದ್ದಿಕವಾಗಿ ಬೆಳವಣಿಗೆಗೆ ಬಾಲ್ಯದಲ್ಲಿ ಪೂರಕ ಪೌಷ್ಟಿಕ ಆಹಾರವನ್ನು ಒದಗಿಸುವುದು ಸೂಕ್ತವೆಂದು ಬೆಳಗಾವಿ ವಿಭಾಗ ಮಟ್ಟದ ಕಾರ್ಯಾಗಾರದಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ರವರು ಬೆಳಗಾವಿ ವಿಭಾಗ ಮಟ್ಟದ ಎಲ್ಲ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ರೈತ ಭವನದ ಸಭಾಂಗಣದಲ್ಲಿ ಶುಕ್ರವಾರದಂದು ನಡೆದ ಶಿಕ್ಷಣ ಇಲಾಖೆಯ ವಿಭಾಗ ಮಟ್ಟದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ ಅವರು ಮಾತನಾಡಿದರು.

ಪಿ.ಎಂ ಪೋಷಣ್ ಶಕ್ತಿ ನಿರ್ಮಾಣ ಯೋಜನೆ ಅಡಿಯಲ್ಲಿ ಈಗಾಗಲೇ ಕರ್ನಾಟಕ ಸರಕಾರ 1 ರಿಂದ 10 ನೇಯ ತರಗತಿಯವರೆಗೆ ವಾರದಲ್ಲಿ 2 ದಿವಸ ಪೂರಕ ಪೌಷ್ಟಿಕ ಆಹಾರ ವಿತರಣೆ ಮಾಡಲಾಗುತ್ತಿದ್ದು, ಕರ್ನಾಟಕ ಸರಕಾರ ಹಾಗೂ ಅಜೀಮ್ ಪೌಂಡೇಶನ ಬೆಂಗಳೂರು ರವರ ಸಹಭಾಗಿತ್ವದಲ್ಲಿ ವಾರದ ಎಲ್ಲ 6 ದಿನಗಳಿಗೆ ಪೂರಕ ಪೌಷ್ಟಿಕ ಆಹಾರ (ಬೇಯಿಸಿದ ಮೊಟ್ಟೆ,/ಶೇಂಗಾ ಚೆಕ್ಕೆ/ಬಾಳೇ ಹಣ್ಣು)ವನ್ನು ವಿತರಿಸುತ್ತಿರುವುದು ಶ್ಲಾಘನೀಯ ಮತ್ತು ಹೆಮ್ಮೆಪಡುವ ಕಾರ್ಯವಾಗಿದೆ. ಆದ ಕಾರಣ ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯವನ್ನು ನಿಯಮನುಸಾರ ಮತ್ತು ಪ್ರಾಮಾಣಿಕತೆಯಿಂದ ಮಾಡಿ ಅರ್ಹ ಫಲಾನುಭವಿಗಳಿಗೆ ಪೂರಕ ಪೌಷ್ಟಿಕ ಆಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಳಗಾವಿ ವಿಭಾಗ ಮಟ್ಟದ ಎಲ್ಲ ಜಿಲ್ಲಾ ಮತ್ತು ತಾಲೂಕ ಮಟ್ಟದ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮಾನ್ಯರು ಸೂಚಿಸಿದರು.

ಶಿಕ್ಷಣಾಧಿಕಾರಿ(ಅಕ್ಷರ ದಾಸೋಹ) ಲಕ್ಷ್ಮಣರಾವ್ ಯಕ್ಕುಂಡಿ, ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಎಸ್.ಸಿ, ಸಹಾಯಕ ನಿರ್ದೇಶಕಿ ನಾಗರತ್ನ ಜಿ(ಪಿ ಎಂ ಪೋಷಣ್), ಹಾಗೂ ಎಪಿಎಫ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ನಾಗರಾಜ್, ಬೆಳಗಾವಿ ವಿಭಾಗದ ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು / ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net