24*7 ನೀರು ಪೂರೈಕೆಗೆ ತಾಲೂಕಿಗೊಂದು  ಗ್ರಾಮ ಆಯ್ಕೆ ಕಡ್ಡಾಯ

IMG-20241128-WA0034.jpg
Published on

-ಜಿಪಂ ಸಿಇಒ ರಾಹುಲ ಶಿಂಧೆ ಸೂಚನೆ

ವಿಜಯವಾಣಿ ಸುದ್ದಿಜಾಲ ಬೆಳಗಾವಿ

ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆ ಕಾಮಗಾರಿ ಪೂರ್ಣಗೊಂಡ ಗ್ರಾಮಗಳಲ್ಲಿ ಪ್ರತಿ ತಾಲೂಕಿನಿಂದ ಒಂದು ಗ್ರಾಮ ಆಯ್ಕೆ ಮಾಡಿಕೊಂಡು ದಿನದ 24 ಗಂಟೆ ಕುಡಿಯುವ ನೀರು ಸರಬರಾಜು ಗ್ರಾಮವನ್ನಾಗಿ ಪರಿವರ್ತನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯ ಸಭೆಯ24*7 ನೀರು ಪೂರೈಕೆಗೆ ತಾಲೂಕಿಗೊಂದು ಗ್ರಾಮ ಆಯ್ಕೆ

-ಜಿಪಂ ಸಿಇಒ ರಾಹುಲ ಶಿಂಧೆ ಸೂಚನೆ

ವಿಜಯವಾಣಿ ಸುದ್ದಿಜಾಲ ಬೆಳಗಾವಿ

ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆ ಕಾಮಗಾರಿ ಪೂರ್ಣಗೊಂಡ ಗ್ರಾಮಗಳಲ್ಲಿ ಪ್ರತಿ ತಾಲೂಕಿನಿಂದ ಒಂದು ಗ್ರಾಮದಲ್ಲಿ ದಿನದ 24 ಗಂಟೆ ಕುಡಿಯುವ ನೀರು ಸರಬರಾಜು ಗ್ರಾಮವನ್ನಾಗಿ ಪರಿವರ್ತನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯ ಸಭೆಯನ್ನು ಜರುಗಿಸಿ, ನಡುವಳಿಯ ಪ್ರತಿಯನ್ನು ಜಿಲ್ಲಾ ಪಂಚಾಯತಿಗೆ ಸಲ್ಲಿಸಬೇಕು.ನಿರ್ಲಕ್ಷೃ ವಹಿಸುವ ತಾಪಂ ಇಒಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ವರ್ಷಗಳಿಂದ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳು ನಿಗದಿತ ಸಮಯದಲ್ಲಿಯೇ ಪೂರ್ಣಗೊಳಿಸಬೇಕು. ಫೂರ್ಣಗೊಂಡಿರುವ ಕಾಮಗಾರಿಗಳ ಗುಣಮಟ್ಟ ಪರಿಶೀಲನೆ ನಡೆಸಬೇಕು.ಅಲ್ಲದೆ, ಕಳಪೆ ಕಾಮಗಾರಿಗಳನ್ನು ಪರಿಶೀಲನೆ ನಡೆಸದೆ ಗ್ರಾಪಂಗಳಿಗೆ ಹಸ್ತಾಂತರ ಮಾಡಿಕೊಂಡರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ಗ್ರಾಪಂಗಳ ವ್ಯಾಪ್ತಿಯಲ್ಲಿ ಕರವಸೂಲಾತಿ ಸಮರ್ಪಕವಾಗಿ ನಡೆಯುತ್ತಿಲ್ಲ. ಮೊಬೈಲ್ ಟವರ್, ಕೈಗಾರಿಕೆ, ಕಾರ್ಖಾನೆಗಳು ಹಾಗೂ ಇತರೇ ಎಲ್ಲ ಖಾಸಗೀ ಕ್ಷೇತ್ರಗಳಿಂದ ಮೂಲಕಗಳಿಂ ಶೇ.50ರಷ್ಟು ತೆರಿಗೆ ವಸೂಲಿ ಆಗಬೇಕು. 15 ದಿನಗಳಲ್ಲಿ ಪ್ರಗತಿ ಸಾಧಿಸಬೇಕು. ಸಕಾಲ ಅಧಿನಿಯಮದಡಿ ಬಾಕಿ ಇರುವ ಅರ್ಜಿಗಳನ್ನು ಆದ್ಯತೆ ಮೇರೆಗೆ 3 ದಿನಗಳಲ್ಲಿ ವಿಲೇವಾರಿ ಮಾಡಲು ಕ್ರಮ ಜರುಗಿಸುವುದು, ಗ್ರಾಮ ಪಂಚಾಯತ ಹಂತದಲ್ಲಿ ವಾರ್ಡ ಸಭೆ, ಸಾಮಾನ್ಯ ಸಭೆ ಹಾಗೂ ಇತರೇ ಎಲ್ಲ ಸಭೆಗಳನ್ನು ಆನ್-ಲೈನ್ ಮೂಲಕ ನಿರ್ವಹಿಸಲು ಕಟ್ಟುನಿಟ್ಟಿನ ಕ್ರಮ ವಹಿಸಿ ಎಂದು ಸೂಚಿಸಿದರು.

ಡಿಜಿಟಲ್ ಗ್ರಂಥಾಲಯಕ್ಕೆ ಸಂಬಂಧಿಸಿದಂತೆ 500 ಗ್ರಾಮ ಪಂಚಾಯಿತಿಗಳು ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 486 ಗ್ರಾಮ ಪಂಚಾಯತ ಗ್ರಂಥಾಲಯಗಳು ಸರ್ಕಾರದಿಂದ ಮಂಜೂರಾಗಿ ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ 480 ಡಿಜಿಟಲ್ ಗ್ರಂಥಾಲಯಗಳನ್ನಾಗಿ ಪರಿವರ್ತಿಸಲಾಗಿದೆ. ಬಾಕಿ ಉಳಿದಿರುವ 6 ಹೊಸ ಗ್ರಾಮ ಪಂಚಾಯತಿಗಳಲ್ಲಿ ಹೊಸ ಕಟ್ಟಡಗಳ ನಿರ್ಮಾಣವಾದ ಕೂಡಲೇ ಡಿಜಿಟಲ್ ಗ್ರಂಥಾಲಯಗಳನ್ನಾಗಿ ಪರಿವರ್ತನೆ ಮಾಡಲು ಕ್ರಮವಹಿಸುವಂತೆ ಸೂಚನೆ ನೀಡಿದರು.

2024-25ನೆ ಸಾಲಿಗೆ 36 ಗ್ರಾಮಗಳಲ್ಲಿ ಬೂದು ನಿರ್ವಹಣಾ ಘಟಕಗಳನ್ನು ಅನುಷ್ಟಾನಗೊಳಿಸಲಾಗುವ ಕಾಮಗಾರಿಗಳಿಗೆ ಈಗಾಗಲೇ ಟೆಂಡರ ಪ್ರಕ್ರಿಯೆ ಜರುಗಿಸಲಾಗಿದ್ದು, ಶೀಘ್ರವಾಗಿ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಸವಳು ಜವಳು ಕಾರ್ಯಕ್ರಮದಡಿ ಆಯ್ದ 21 ಗ್ರಾಮಗಳ ಕಾಮಗಾರಿಗಳಿಗೆ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಟೆಂಡರ ಪ್ರಕ್ರಿಯೆಗಳ ಮೂಲಕ ಕಾಮಗಾರಿಗಳನ್ನು ಅನುಷ್ಟಾನಗೋಳಿಸಿ ಪ್ರಾರಂಬಿಸದೇ ಇರುವ 26 ಕೂಸಿನ ಮನೆಗಳನ್ನು ಒಂದು ವಾರದ ಒಳಗಾಗಿ ಪ್ರಾರಂಬಿಸಿ ಈ ಕಾರ್ಯಾಲಯಕ್ಕೆ ವರದಿ ಸಲ್ಲಿಸಬೇಕುಎ ಎಂದು ಸೂಚನೆ ನೀಡಿದರು.

ಜಿಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ ಅಡವಿಮಠ, ಬಸವರಾಜ ಹೆಗ್ಗನಾಯಕ್, ಪರುಶರಾಮ್ ದುಡಗುಂಟಿ, ಪ್ರೋಬೆಷನರಿ ಐಎಎಸ್ ಅಧಿಕಾರಿ ದಿನೇಶಕುಮಾರ ಮೀನಾ ಇತರರಿದ್ದರು.

........

ಕೋಟ್ಸ್

ಜಿಲ್ಲೆಯ ಎಲ್ಲ ಗ್ರಾಪಂ ಸಿಬ್ಬಂದಿಗೆ ಬಯೋ ಮೆಟ್ರಿಕ್ ಮೂಲಕ ಹಾಜರಾತಿ ಕಡ್ಡಾಯ. ನಿಗದಿತ ಸಮಯದಲ್ಲಿ ಹಾಜರಾತಿ ನೀಡದಿರುವ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗುವುದು.ಅಲ್ಲದೆ, ಸಂಬಳ ಪ್ರಕ್ರಿಯೆಗಳನ್ನು ತಡೆಹಿಡಿಯುವಂತೆ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

-ರಾಹುಲ ಶಿಂಧೆ, ಜಿಪಂ ಸಿಇಒ

..................

ನ್ನು ಜರುಗಿಸಿ, ನಡುವಳಿಯ ಪ್ರತಿಯನ್ನು ಜಿಲ್ಲಾ ಪಂಚಾಯತಿಗೆ ಸಲ್ಲಿಸಬೇಕು.ನಿರ್ಲಕ್ಷೃ ವಹಿಸುವ ತಾಪಂ ಇಒಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net