

ಬೆಳಗಾವಿ :ಇ-ಸ್ವತ್ತು ಉತಾರ ಮಾಡಿಸುವದರಿಂದ ಮೈಕ್ರೋ ಪೈನಾನ್ಸ್ ಗಳ ಹಾವಳಿಯಿಂದ ನಾಗರಿಕರನ್ನು ಪಾರು ಮಾಡಬಹುದು. ಇ-ಸ್ವತ್ತು ಉತಾರ ಪಡೆದ ಫಲಾನುಭವಿಗಳು ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ಸುಲಭವಾಗಿ ಸಾಲಸೌಲಭ್ಯ ದೊರೆಯುತ್ತದೆ ಕಾರಣ ಎಲ್ಲರೂ ಈ ದಿಸೆಯಲ್ಲಿ ಶ್ರಮಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ತಿಳಿಸಿದರು.
ಹುಕ್ಕೇರಿ,ಚಿಕ್ಕೋಡಿ ತಾಲೂಕಿನ ಯಮಕನಮರಡಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಗ್ರಾಮ ಪಂಚಾಯತ ಸದಸ್ಯರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಗ್ರಾಮಠಾಣಾ ಆಸ್ತಿಗಳಿಗೆ ಇ-ಸ್ವತ್ತು ಉತಾರ ನಮೂನೆ 09 ವಿತರಿಸುವ ಕುರಿತು ಮಾಹಿತಿ ನೀಡಿದರು. ತದ ನಂತರ ಇ-ಸ್ವತ್ತು ನಮೂನೆ 09 ಕೋರಿ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರ ಮನೆಗೆ ಖುದ್ದಾಗಿ ಭೇಟಿ ನೀಡಿ ದಿಶಾಂಕ ಮೊಬೈಲ್ ಆ್ಯಪ್ ಮೂಲಕ ಆಸ್ತಿಯ ಸರ್ವೆ ಮಾಡಬೇಕು ಎಂದರು.
ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಡಬ್ಲ್ಯೂ.ಟಿ.ಪಿ ವಾಟರ ಸಪ್ಲಾಯಗೆ ಭೇಟಿ ನೀಡಿ ಪರಿಶೀಲಿಸಿದರು. ಖಡಕಲಾಟ ಗ್ರಾಮ ಪಂಚಾಯತಿ ವ್ತಾಪ್ತಿಯ ಪೀರನವಾಡಿ ಗ್ರಾಮದಲ್ಲಿನ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ಅಪೂರ್ಣವಾಗಿದ್ದು ಅದನ್ನು ಪೂರ್ಣಗೊಳಿಸಲು ಕಾರ್ಯಪಾಲಕ ಅಭಿಯಂತರರು ಗ್ರಾ.ಕು.ನೀ & ನೈ ಇಲಾಖೆ ಚಿಕ್ಕೋಡಿ ವಿಭಾಗ ಹಾಗೂ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಿದರು.
ಮನರೇಗಾ ಯೋಜನೆಗೆ ಸಂಬಂಧಿಸಿದಂತೆ ಖಡಕಲಾಟ, ಪಟ್ಟಣಕೋಡಿ ಮತ್ತು ವಾಳಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಮುದಾಯ ಕುಡಿಯುವ ನೀರಿನ ಬಾವಿಗೆ ಬೇಡಿಕೆ ಇದ್ದು, ಅಂತಹ ಗ್ರಾಮ ಪಂಚಾಯತಿಗಳ ಕ್ರಿಯಾ ಯೋಜನೆಯನ್ನು ಕೂಡಲೇ ಸಿದ್ದಪಡಿಸಿ, ಜಿಲ್ಲಾ ಪಂಚಾಯತಿಯಿಂದ ಅನುಮೋದನೆ ಪಡೆದುಕೊಂಡು ತ್ವರಿತವಾಗಿ ಕಾಮಗಾರಿಯನ್ನು ಪ್ರಾರಂಭಿಸಲು ಕಾರ್ಯನಿರ್ವಾಹಕ ಅಧಿಕಾರಿಗಳು ಚಿಕ್ಕೋಡಿ ತಾಲೂಕ ಪಂಚಾಯತರವರಿಗೆ ಸೂಕ್ತ ನಿರ್ದೇಶನ ನೀಡಿದರು.
ನರೇಗಾ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ನವಲಿಹಾಳ ಗ್ರಾಮ ಪಂಚಾಯತಿ ಕಟ್ಟಡ, ಸಂಜೀವಿನಿ ಶೆಡ್, ಗೋದಾಮು ಕಾಮಗಾರಿಗಳನ್ನು ವೀಕ್ಷಿಸಿ, ಕಾರ್ಯನಿರ್ವಾಹಕ ಅಧಿಕಾರಿ, ಸಹಾಯಕ ನಿರ್ದೇಶಕ(ಗ್ರಾ ಉ) ಪಂಚಾಯತ ಅಭಿವೃದ್ಧಿ ಅಧಿಕಾರಿ, ತಾಂತ್ರಿಕ ಸಂಯೋಜಕ, ತಾಂತ್ರಿಕ ಸಹಾಯಕರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವಡ್ರಾಳ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡು ಅಧಿಕಾರಿಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆ ಹರಿದುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ಚಿಕ್ಕೋಡಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್ ಕಾದ್ರೋಳಿ, ಹುಕ್ಕೇರಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್. ಮಲ್ಲಾಡದ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಚಿಕ್ಕೋಡಿ ವಿಭಾಗ ಕಾರ್ಯಪಾಲಕ ಅಭಿಯಂತರರಾದ ಪಾಂಡುರಂಗರಾವ ಕಾರ್ಯಪಾಲಕ ಅಭಿಯಂತರರು ಪಂ ರಾ ಇಂಜಿಯನಿಯರ ವಿಭಾಗ ಸಹಾಯಕರಾದ ವಿನಾಯಕ ಮಠಪತಿ ನಿರ್ದೇಶಕ(ಗ್ರಾ ಉ) ಶಿವಾನಂದ ಶಿರಗಾಂವೆ, ಸಹಾಯಕ ನಿರ್ದೇಶಕ(ಗ್ರಾ.ಉ) ಲಕ್ಷ್ಮೀನಾರಾಯಣ ಪಿ, ಸಹಾಯಕ ಕಾರ್ಯಕಾರಿ ಅಭಿಯಂತರ ವಿನಾಯಕ ಪೂಜಾರ ಗ್ರಾ.ಕು.ನೀ & ನೈ. ಉಪ ವಿಭಾಗ ಹುಕ್ಕೇರಿ, ಸಹಾಯಕ ಅಭಿಯಂತರ ಅಭಿಷೇಕ ಪವಾರ್, ಚೇತನ ಕಡಕೋಳ, ಸಂತೋಷ ಪಾಟೀಲ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಬಿ.ಡಿ ನಾಯಿಕವಾಡಿ ಗ್ರಾ.ಕು.ನೀ&ನೈ ಇಲಾಖೆ ಚಿಕ್ಕೋಡಿ ವಿಭಾಗ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಮನರೇಗಾ ಐ.ಇ.ಸಿ ಸಂಯೋಜಕರು, ಹುಕ್ಕೇರಿ ಮತ್ತು ಚಿಕ್ಕೋಡಿ, ಆಡಳಿತ ಸಹಾಯಕರು ಚಿಕ್ಕೋಡಿ, ತಾ.ಪಂ. ಇತರರು ಹಾಜರಿದ್ದರು.