

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ನಿರ್ದೇಶನದಂತೆ ನಗರದ ಜಿಪಂ ಕಚೇರಿಯಲ್ಲಿ ಪ್ರತಿ ತಿಂಗಳ ಮೊದಲ ಶನಿವಾರವನ್ನು “ಸ್ವಚ್ಛ ಶನಿವಾರ” ವನ್ನಾಗಿ ಆಚರಿಸಲಾಯಿತು.
ಜಿಪಂ ಸಿಇಒ ರಾಹುಲ್ ಶಿಂಧೆ ರವರು ಮಾರ್ಚ ತಿಂಗಳ ಮೊದಲ ಶನಿವಾರವನ್ನು ಜಿಲ್ಲಾ ಪಂಚಾಯತ ಕಚೇರಿಯ ಆವರಣದಲ್ಲಿ “ಸ್ವಚ್ಛ ಶನಿವಾರ” ಆಚರಿಸಲು ಸೂಚನೆ ಮೇರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು,ಸಿಬ್ಬಂದಿ ತಮಗೆ ಸಂಬಂಧಿಸಿದ ಶಾಖೆಗಳಲ್ಲಿ ತಮ್ಮ-ತಮ್ಮ ಕ್ಯಾಬಿನ್ ಮತ್ತು ಕಚೇರಿಯ ಒಳಾಂಗಣ ಮತ್ತು ಹೊರಾಂಗಣ ಸ್ವಚ್ಛಗೊಳಿಸುವ ಮುಖಾಂತರ “ಸ್ವಚ್ಛ ಶನಿವಾರ” ವನ್ನು ಯಶಸ್ವಿಯಾಗಿ ಆಚರಿಸಿದರು.
ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ, ಉಪಕಾರ್ಯದರ್ಶಿ(ಆಡಳಿತ) ಬಸವರಾಜ್ ಹೆಗ್ಗನಾಯಕ್, ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ್ ಅಡವಿಮಠ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಸಹಾಯಕ ಕಾರ್ಯದರ್ಶಿ ರಾಹುಲ್ ಕಾಂಬಳೆ, ಕಚೇರಿ ವ್ಯವಸ್ಥಾಪಕ ಬಸವರಾಜ್ ಮುರಘಾಮಠ, ಸ್ವಚ್ಛ ಭಾರತ ಮಿಷನ್(ಗ್ರಾ) ಯೋಜನೆಯ ಎಲ್ಲ ಜಿಲ್ಲಾ ಸಮಾಲೋಚಕರು, ಜಿಲ್ಲಾ ಪಂಚಾಯತನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.