ಹಳ್ಳಿಗಳಲ್ಲಿನ ಜನರ ಸಮಸ್ಯೆಗೆ ಸ್ಪಂದಿಸಿದ ಜಿಪಂ ಸಿಇಒ ರಾಹುಲ ಶಿಂದೆ

IMG-20250404-WA0038.jpg
Published on

ಬೆಳಗಾವಿ:ಹಳ್ಳಿಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದಂತೆ ಎಚ್ಚರಿಕೆ ವಹಿಸಿ. ಜತೆಗೆ ಶುದ್ದ ಕುಡಿಯುವ ನೀರಿನ ಘಟಕಗಳು ಸುಸ್ಥಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.

ಅಥಣಿ ತಾಲೂಕು ಪಂಚಾಯತ ಸಭಾ ಭವನದಲ್ಲಿ ಎಲ್ಲ ತಾಲೂಕ ಮಟ್ಟದ ಅಧಿಕಾರಿ ಹಾಗೂ ಎಲ್ಲ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ನರೇಗಾ ಯೋಜನೆಗೆ ಸಂಬಂಧಿಸಿದಂತೆ ಪ್ರತಿಯೊಂದು ಗ್ರಾಮ ಪಂಚಾಯತಿಗಳಲ್ಲಿ ಸಮುದಾಯ ಕಾಮಗಾರಿ ಪ್ರಾರಂಭಿಸುವುದು ಮತ್ತು ಜನರು ಉದ್ಯೋಗ ಅಂತ ಬೇರೆ ಕಡೆಗೆ ವಲಸೆ ಹೋಗಬಾರದು ಅದಕ್ಕಾಗಿ ಸ್ವ-ಗ್ರಾಮದಲ್ಲಿ ಉದ್ಯೋಗ ನೀಡಬೇಕು. ಅದರ ಜೊತೆಗೆ ಎಪ್ರಿಲ್‌ 15ರ ಒಳಗಾಗಿ ಪ್ರತಿಯೊಬ್ಬ ವಿಕಲಚೇತನರಿಗೆ ಜಾಬ್‌ ಕಾರ್ಡ್ ಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ತಿಳಿಸಿದರು..

ಇದೇ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ಭೇಟಿ ನೀಡಿ ಅಲ್ಲಿನ ಮೇಡಿಸಿನ್‌ಗಳನ್ನು ಪರಿಶೀಲನೆ ಮಾಡಿದರು. ಆಯುಷ್ಮಾನ ಭಾರತ್‌ ಆರೋಗ್ಯ ಮೀತ್ರ ವಿಭಾಗಕ್ಕೆ ಬೇಟಿ ನೀಡಿ ಅಲ್ಲಿನ ಕಾರ್ಯವೈಖರಿ ಪರಿಶೀಲಿಸಿದರು.

ಝಂಜರವಾಡ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ವೀಕ್ಷಣೆ ಮಾಡಿದರು.

ಅಥಣಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ ಮತ್ತು ಕಾಗವಾಡ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣಾ ವಾಲಿ, ಅಥಣಿ ತಹಶೀಲ್ದಾರರು ಸಿದ್ದರಾಯ ಭೋಸಗಿ, ಕಾಗವಾಡ ತಹಶೀಲ್ದಾರರು ಆರ್.ಆರ್. ಬುರ್ಲಿ, ಕಾರ್ಯನಿರ್ವಾಹಕ ಅಭಿಯಂತರರು ಗ್ರಾ.ಕು.ನೀ ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಚಿಕ್ಕೋಡಿ ಪಾಂಡುರಂಗ ಜೋಶಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾ.ಕು.ನೀ ಮತ್ತು ನೈರ್ಮಲ್ಯ ಉಪ ವಿಭಾಗ ಅಥಣಿ ರವೀಂದ್ರ ಮುರಗಾಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net