ರಾಹುಲ ಶಿಂಧೆ ಕಾರ್ಯಕ್ಕೆ; ಸಚಿವ ಸತೀಶ ಜಾರಕಿಹೊಳಿ ಮೆಚ್ಚುಗೆ

IMG-20250528-WA0004.jpg
Published on

-ಜಿಲ್ಲೆಯಲ್ಲಿ ಸಿಇಟಿ-ಸಕ್ಷಮ್ ಯಶಸ್ಸು

ಬೆಳಗಾವಿ: ಶೈಕ್ಷಣಿಕ ಕ್ಷೇತ್ರದಲ್ಲಿ ವಿನೂತನವಾಗಿ ಆರಂಭಿಸಲಾಗಿರುವ ಸಿಇಟಿ-ಸಕ್ಷಮ್ ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಸಿಇಒ ರಾಹುಲ ಶಿಂಧೆ ಅದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (KCET)ಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅನುಷ್ಠಾನ ಗೊಂಡ ಸಿಇಟಿ-ಸಕ್ಷಮ ಕಾರ್ಯಕ್ರಮ ಯಶಸ್ವಿಯಾಗಿದೆ. ಇದನ್ನು ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಯೋಜನೆ ಹಾಕಿಕೊಂಡಿದೆ. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದರು.

ವಿದ್ಯಾರ್ಥಿಗಳ ಸಾಧನೆಯಲ್ಲಿ ಶಿಕ್ಷಕರು ಮತ್ತು ಅಧಿಕಾರಿಗಳ ಪಾತ್ರ ಮಹತ್ವಾದ್ದಾಗಿದೆ. ಕೆ-ಸಿಇಟಿ ಪರೀಕ್ಷೆಯಲ್ಲಿ ಜಿಲ್ಲೆಯ ಸರಕಾರಿ ಶಾಲೆಯ ಮಕ್ಕಳು ಉತ್ತಮ ಸಾಧನೆಗೈದಿರುವುದು ವಿಶೇಷವಾಗಿದೆ. ಖಾಸಗಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಹೆಚ್ಚಾಗಿರುತ್ತದೆ ಎಂದರು.

ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಗ್ರಾಮೀಣ ಪ್ರದೇಶದ ಹಾಗೂ ಬಡ ಕುಟುಂಬದ ಮಕ್ಕಳನ್ನು ಸಿಇಟಿ ಪರೀಕ್ಷೆಗೆ ಸಜ್ಜುಗೊಳಿಸಲು ಸರಕಾರಿ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಸಿಇಟಿ ಸಕ್ಷಮ್ ಎಂಬ ವಿನೂತನ ತರಬೇತಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿತ್ತು.

ಸಿಇಟಿ ಸಕ್ಷಮ್ ಮೂಲಕ ತರಬೇತಿ ಪಡೆಸುಕೊಂಡಿರುವ ಜಿಲ್ಲೆಯ ಒಟ್ಟು 61 ವಿದ್ಯಾರ್ಥಿಗಳು 50 ಸಾವಿರ ಒಳಗೆ ರ‌್ಯಾಂಕಿಂಗ್ ಪಡೆದುಕೊಂಡಿದ್ದಾರೆ ಎಂದರು.

ಬೆಳಗಾವಿಯಲ್ಲಿ ಕಳೆದ ಬಾರಿ 50 ಸಾವಿರ ರ‌್ಯಾಂಕಿನೊಳಗೆ ಕೇವಲ 4 ಜನರಿದ್ದರು ಈ ಬಾರಿ 18 ಜನರು ಇದ್ದಾರೆ. ಅದೇ ರೀತಿ ಚಿಕ್ಕೋಡಿಯಲ್ಲಿ ಈ ಬಾರಿ 43 ಜನರು ಬಂದಿದ್ದಾರೆ. ಇದು ಸಿಇಟಿ ಸಕ್ಷಮ್ ಯಶಸ್ವಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net