ಡಿಸಿಸಿ ಬ್ಯಾಂಕ್ ಆಡಳಿತಾಧಿಕಾರಿಯಾಗಿ ರಾಹುಲ ಶಿಂಧೆ ನೇಮಕ

lxJb9fHR_400x400.jpg
Published on

ಬೆಳಗಾವಿ: ಜಿಲ್ಲಾ ಸಹಕಾರಿ ಬ್ಯಾಂಕ್ (ಡಿಸಿಸಿ) ಆಡಳಿತ ಮಂಡಳಿಯ ನಿರ್ದೇಶಕರ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆ ರಾಜ್ಯ ಸರ್ಕಾರವು ಜಿಪಂ ಸಿಇಒ ರಾಹುಲ ಶಿಂಧೆ ಅವರನ್ನು ಡಿಸಿಸಿ ಬ್ಯಾಂಕ್‌ನ ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.

ಬ್ಯಾಂಕಿನ ಆಡಳಿತ ಮಂಡಳಿಯ ಅಧಿಕಾರ ಅವಧಿಯ 2025 ನವಂಬರ್ 5ರಂದು ಮುಕ್ತಾಯಗೊಂಡಿದೆ. ಬ್ಯಾಂಕಿನ ಚುನಾವಣೆಗೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ದಾಖಲಾದ ರಿಟ್ ಅರ್ಜಿ ಮತ್ತು ರಿಟ್ ಅಪೀಲುಗಳ ಹಿನ್ನೆಲೆ ಪ್ರಸ್ತುತ ಆಡಳಿತ ಮಂಡಳಿಯ ಅಧಿಕಾರ ಅವಧಿ ಮುಗಿಯುವುದರ ಒಳಗಾಗಿ ಹೊಸ ಆಡಳಿತ ಮಂಡಳಿ ರಚನೆ ಆಗುವ ಸಾಧ್ಯತೆ ಇರುವುದಿಲ್ಲ. ಕಾಲಮಿತಯೊಳಗೆ ಚುನಾವಣೆ ಜರುಗಿ ಆಡಳಿತ ಮಂಡಳಿ ರಚನೆಯಾಗದಿದ್ದರೆ ಆಡಳಿತಾತ್ಮಕ ಸಮಸ್ಯೆಗಳನ್ನು ಉದ್ಬವಿಸುವ ಸಾಧ್ಯತೆಯಿದೆ. ಹೀಗಾಗಿ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯನ್ನಾಗಿ ರಾಹುಲ ಶಿಂಧೆ ಅವರನ್ನು ನೇಮಕಗೊಳಿಸಲಾಗಿದೆ ಎಂದು ಸಹಕಾರ ಸಂಘಗಳ ಸಂಯುಕ್ತ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net