ಅಂಗನವಾಡಿ, ಶಾಲೆ ಪರಿಶೀಲಿಸಿದ ಸಿಇಒ

18 vikram 8
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ತಾಲೂಕಿನ ನರೇಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಜಿಪಂ ಸಿಇಒ ಭುವನೇಶ ಪಾಟೀಲ ಅವರು ಭೇಟಿ ನೀಡಿ ಮಕ್ಕಳಿಗೆ ನೀಡಲಾದ ಆಹಾರದ ಗುಣಮಟ್ಟ ಪರಿಶೀಲಿಸಿದರು.

ಅಂಗನವಾಡಿಯಲ್ಲಿ ನಿರ್ವಹಿಸುವ ಪಡಿತರ ವಿತರಣಾ ವಹಿ, ಬಾಣಂತಿ ಗಭಿರ್ಣಿಯರ ಮಾಹಿತಿ, ಆರೋಗ್ಯ ತಪಾಸಣಾ, ಮಕ್ಕಳ ಹಾಜರಾತಿ ವಹಿ ಪರಿಶೀಲಿಸಿದ ಸಿಇಒ, ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ಕುರಿತು ಸಲಹೆ ಸೂಚನೆಗಳನ್ನು ನೀಡಿದರು.

ನಂತರ ಮಂಗಳಗಟ್ಟಿ ಗ್ರಾಮಕ್ಕೆ ಭೇಟಿ ನೀಡಿ, ಶಾಲೆ ಮಕ್ಕಳೊಂದಿಗೆ ಸಂವಾದ ನಡೆಸಿದರು. ಶಾಲಾ ಶೌಚಗೃಹ, ಶಾಲೆ ಕೊಠಡಿಗಳನ್ನು ವೀಕ್ಷಿಸಿದರು. ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ, ಘನತ್ಯಾಜ್ಯ ವಿಲೇವಾರಿ ಘಟಕ, ಜೆಜೆಎಂ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಪಿಡಿಒ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net