

ಚಿತ್ರದುರ್ಗ: ಚಿತ್ರದುರ್ಗ ತಾಲೂಕು ವಿವಿಧ ಗ್ರಾಪಂಗಳಿಗೆ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಅವರು ಮಂಗಳವಾರ ಭೇಟಿ ನೀಡಿ,ಜಲಜೀವನ್ ಮಿ ನ್(ಜೆಜೆಎಂ)ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ವೀಕ್ಷಣೆ ಮಾಡಿದರು. ಹುಲ್ಲೂರು ಗ್ರಾಮದಲ್ಲಿ ಜಲ ಜೀವ ನ್ ಮಿಷನ್ ಕಾಮಗಾರಿ ವೀಕ್ಷಿಸಿ,ಜಲ ಸಂಗ್ರಹಾಗಾರದ ಸುತ್ತಲೂ ತಂತಿಬೇಲಿ ಅಳವಡಿಸುವಂತೆ ಸಂಬಂಧಿಸಿದ ಇಂಜಿನಿಯರ್‌ಗಳಿಗೆ ಸೂಚಿಸಿ ದರು. ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಹಾಗೂ ಮಕ್ಕಳ ಹಾಜರಾತಿ,ಮಧ್ಯಾಹ್ನದ ಬಿಸಿ ಊಟದ ಬಗ್ಗೆ ಪರಿಶೀಲಿಸಿದರು.
ಕಡ್ಲೇಗುದ್ದು ಗ್ರಾಮ ಸಮೀಪ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಮತೋಲನ ಜಲಸಂಗ್ರಹಗಾರ ಪರಿಶೀಲಿಸಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು. ಜೆಜೆಎಂಗೆ ಸಂಬಂಧಿಸಿದಂತೆ ನಾಮಫಲಕ ಅಳವಡಿಸಲು ಸೂಚಿಸಿದರು. ಈ ಗ್ರಾಮದಲ್ಲಿ 24/7 ಕುಡಿಯುವ ನೀರು ಪೂರೈಕೆಗೆ ಶಾಸಕರು ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ ಎಂದರು.
ಕಸವನಹಳ್ಳಿ ಗ್ರಾಮದ ಎಲ್ಲ ಕಾಲನಿಗಳಿಗೆ ಭೇಟಿ ನೀಡಿ ನಳ ಸಂಪರ್ಕ ಕಾಮಗಾರಿ,ಸಿಸಿ ರಸ್ತೆ ರೆಸ್ಟೋರೆಷನ್ ಕಾರ‌್ಯ ವೀಕ್ಷಿಸಿದರು. ಜಲಜೀವನ್ ಮಿಷನ್ ಯೋಜನೆ ಕಾರ್ಯಾತ್ಮಕ ನಳ ಸಂಪರ್ಕದ ಮೂಲಕವೇ ನೀರು ಸರಬರಾಜು ಮಾಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂ ಚಿಸಿದರು.
(ಸಿಟಿಡಿ 23 ಸಿಇಒ ಸೋಮಶೇಖರ್)ಮಗ್‌ಶಾಟ್
----