

ರಾಯಚೂರು ಜಿಲ್ಲಾ ಪಂಚಾಯತ್‌ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಈಶ್ವರ ಕುಮಾರ ಕಾಂದೂ ಬುಧವಾರ ಅಧಿಕಾರ ಸ್ವೀಕಾರ ಮಾಡಿದರು.
ಮೂಲತಃ ಉತ್ತರ ಪ್ರದೇಶ ರಾಜ್ಯದವಾರದ ಈಶ್ವರ ಕುಮಾರ ಕಾಂದೂ ಅವರು ಈ ಮೊದಲು 2019-20ರಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಪ್ರೊಬೆಷನರಿ ಅವಧಿಯನ್ನು ಪೂರ್ಣಗೊಳಿಸಿದರು. ಬಳಿಕ ಮಡಿಕೇರಿಯಲ್ಲಿ 19 ತಿಂಗಳು ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದರು.
ನಂತರ ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ, ಕಾರವಾರ ಜಿಲ್ಲೆಯಲ್ಲಿ ಎರಡೂವರೆ ವರ್ಷಗಳ ಕಾಲ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸಿದ್ದಾರೆ.