ದಾಖಲೆ ಪರಿಶೀಲಿಸಿ ಹಣ ಬಿಡುಗಡೆ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮಾಹಿತಿ

Meeting)
Published on

ಮಂಡ್ಯ: ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಜಿಲ್ಲೆಯಲ್ಲಿ 21 ಪ್ರಕರಣಗಳಲ್ಲಿ ನಗದು ಹಣ ಜಪ್ತಿ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಹಣ ಬಿಡುಗಡೆ ಸಮಿತಿಯ ಸಭೆ ಆಯೋಜಿಸಲಾಗಿತ್ತು.

ಹಣ ಬಿಡುಗಡೆ ಸಮಿತಿ ಅಧ್ಯಕ್ಷರೂ ಆದ ಜಿಪಂ ಸಿಇಒ ಶೇಕ್ ತನ್ವೀರ್ ಆಸಿಫ್ ಮಾತನಾಡಿ, 21 ಪ್ರಕರಣಗಳಲ್ಲಿ ನಗದು ಹಣ ಜಪ್ತಿ ಮಾಡಲಾಗಿದೆ. ಇದರಲ್ಲಿ 2 ಪ್ರಕರಣದಲ್ಲಿ 10 ಲಕ್ಷ ರೂಗೂ ಹೆಚ್ಚು ಮೊತ್ತವಿದೆ. ಇದನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿದ್ದು, ಉಳಿದಂತೆ 19 ಪ್ರಕರಣಗಳನ್ನು ವಾರಸುದಾರರು ಸೂಕ್ತ ದಾಖಲೆ ಒದಗಿಸಿದ ನಂತರ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಖಜಾನೆಯ ಉಪನಿರ್ದೇಶಕ ಸಿದ್ದಲಿಂಗಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net