ಅಪೌಷ್ಟಿಕತೆ ನಿವಾರಣೆಗೆ ಮೊಟ್ಟೆ ವಿತರಣೆ

ceo visit
ದೇವನಹಳ್ಳಿಯ ಬೆಟ್ಟಕೋಟೆ ಗ್ರಾಪಂ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ಮದ ಬಿಸಿಯೂಟ ಕಾರ್ಯಕ್ರಮವನ್ನು ಜಿಪಂ ಸಿಇಒ ಡಾ.ಕೆ.ಎನ್.ಅನುರಾಧಾ ಉದ್ಘಾಟಿಸಿದರು. ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ, ತಹಸೀಲ್ದಾರ್ ಬಾಲಕೃಷ್ಣ,ತಾಪಂ ಇಒ ಶ್ರೀನಾಥಗೌಡ, ಕ್ಷೇತ್ರಶಿಕ್ಷಣಾಧಿಕಾರಿ ಸುಮಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸುಧಾ ಇದ್ದರು.
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಸರ್ಕಾರ ಶಾಲಾ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣದ ಜತೆಗೆ ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟದೊಂದಿಗೆ ವಾರದ 6 ದಿನವೂ ಮೊಟ್ಟೆ ವಿತರಣೆ ಮಾಡುತ್ತಿದೆ. ಈ ಕಾರ್ಯಕ್ರಮ ಮಕ್ಕಳಲ್ಲಿನ ಅಪೌಷ್ಟಿಕತೆಯ ಕೊರತೆ ನಿವಾರಿಸಲು ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧಾ ಹೇಳಿದರು.

ದೇವನಹಳ್ಳಿ ತಾಲೂಕು ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ 2024-25ನೇ ಸಾಲಿನ ಮಧ್ಯಾಹ್ನದ ಉಪಹಾರ ಯೋಜನೆಯಡಿ ಆಜೀಂ ಪ್ರೇಮ್ ಜೀ ಪೌಂಡೇಶನ್ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುವ 2 ದಿನಗಳ ಜತೆಗೆ ಹೆಚ್ಚುವರಿ 4 ದಿನ ಸೇರಿ ವಾರದ 6 ದಿನವೂ ಪೌಷ್ಟಿಕ ಆಹಾರದ ಜತೆಗೆ ಮೊಟ್ಟೆ ವಿತರಿಸಲಾಗುವುದು. ಜಿಲ್ಲಾದ್ಯಂತ 64,934 ಮಕ್ಕಳು ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net