ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಸಿಇಒ ಭೇಟಿ

CEO visits CET exam center
ವಿಜಯಪುರದಲ್ಲಿ ನಡೆದ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಜಿ.ಪಂ. ಸಿಇಒ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Published on

ವಿಜಯಪುರ : ನಗರದ ವಿವಿಧ ಕಾಲೇಜುಗಳಲ್ಲಿ ಬುಧವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷಾ (ಸಿಇಟಿ) ಕೇಂದ್ರಗಳಿಗೆ ಜಿ.ಪಂ. ಸಿಇಒ ರಿಷಿ ಆನಂದ ಭೇಟಿ ನೀಡುವ ಮೂಲಕ ಪರೀಕ್ಷಾ ವ್ಯವಸ್ಥೆ, ಪರೀಕ್ಷೆ ಕೇಂದ್ರಗಳಲ್ಲಿ ಕಲ್ಪಿಸಿದ ಮೂಲ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ನಗರದ ಪಿಡಿಜೆ ಪ.ಪೂ. ಕಾಲೇಜು ಮತ್ತು ಸರ್ಕಾರಿ ಮಹಿಳೆಯರ ಮತ್ತು ಪುರುಷರ ಪ.ಪೂ. ಕಾಲೇಜುಗಳಲ್ಲಿನ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿ, ವಿದ್ಯಾರ್ಥಿಗಳಿಗೆ ಆಸನಗಳ ವ್ಯವಸ್ಥೆ, ವಿದ್ಯುತ್ ದೀಪದ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿದ ಕುರಿತು ಪರಿಶೀಲಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಿರುವುದೂ ಸೇರಿದಂತೆ ಪರೀಕ್ಷಾ ಕೇಂದ್ರಗಳಿಗೆ ಪೋಲಿಸ್ ಭದ್ರತಾ ವ್ಯವಸ್ಥೆ ಮಾಡಿರುವ ಕುರಿತು ಸಮಗ್ರ ಪರಿಶೀಲನೆ ನಡೆಸಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಂಡು, ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

ಪ್ರಶಾಂತ ವಾತಾವರಣದಲ್ಲಿ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸ್ನೇಹಿ ಪರೀಕ್ಷಾ ವ್ಯವಸ್ಥೆಗೆ ಅಗತ್ಯ ಕ್ರಮಕ್ಕೆ ಅವರು ಸೂಚಿಸಿದರು.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಬಸವರಾಜ ಗಂಗನಳ್ಳಿ, ಪರೀಕ್ಷಾ ವೀಕ್ಷಕ ಎಸ್.ಎಸ್. ಅಂಗಡಿ, ಪ್ರಶ್ನೆ ಪತ್ರಿಕೆ ಪಾಲಕ ದಂದರಗಿ ಮತ್ತಿತರರಿದ್ದರು.

1069 ವಿದ್ಯಾರ್ಥಿಗಳು ಗೈರು

ವಿಜಯಪುರ : ನಗರದ ವಿವಿಧ ಪರೀಕ್ಷಾ ಕೇಮದ್ರದಲ್ಲಿ ಬುಧವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಭೌತಶಾಸ್ತ್ರ ಪರೀಕ್ಷೆಗೆ ನೋಂದಾಯಿಸಿಕೊಂಡ 13275 ಪರೀಕ್ಷಾರ್ಥಿಗಳ ಪೈಕಿ 12747 ಹಾಜರಾಗಿ, 528 ಪರೀಕ್ಷಾರ್ಥಿಗಳು ಹಾಗೂ ಮಧ್ಯಾಹ್ನ ನಡೆದ ರಸಾಯನ ಶಾಸ್ತ್ರ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡ 13636 ಪರೀಕ್ಷಾರ್ಥಿಗಳ ಪೈಕಿ 13095 ಪರೀಕ್ಷಾರ್ಥಿಗಳು ಹಾಜರಾಗಿ, 541 ಪರೀಕ್ಷಾರ್ಥಿಗಳು ಗೈರು ಉಳಿದರು ಎಂದು ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net