ಡಿ.೨೦ ರಂದು ಸಿರಿಧಾನ್ಯ, ಪಾಕ ಸ್ಪರ್ಧೆ

b.s.chandrashekar
Published on

ಮಡಿಕೇರಿ: ಕರ್ನಾಟಕ ಸರ್ಕಾರ ಕೃಷಿ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ ೨೦೨೫ ರ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವನ್ನು ಡಿ.೨೦ ರಂದು ಬೆಳಗ್ಗೆ ೭ ಗಂಟೆಗೆ ಕೊಡಗು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಲಿದ್ದಾರೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಲ್ನಡಿಗೆ ಜಾಥಾ ಕಾರ್ಯಕ್ರಮ ನಗರದ ಕೋಟೆ ಆವರಣದಿಂದ ಗಾಂಧಿ ಮೈದಾನವರೆಗೆ ಆಯೋಜಿಸಲಾಗಿದೆ. ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಕೃಷಿ ಇಲಾಖೆಯಿಂದ ಡಿ.೨೦ ರಂದು ಬೆಳಗ್ಗೆ ೧೦ ಗಂಟೆಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿ.೧೮ ರ ಸಂಜೆ ೫ ಗಂಟೆಯೊಳಗೆ ಖುದ್ದಾಗಿ ಸಂಬಂಧಪಟ್ಟ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಕೋರಿದೆ.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ೨೦೨೫ ರ ಜ.೨೩ ರಿಂದ ೨೫ ರವರೆಗೆ ಬೆಂಗಳೂರಿನಲ್ಲಿ ಏರ್ಪಡಿಸುವ ರಾಜ್ಯ ಮಟ್ಟದ ಸ್ಪರ್ದೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಖಾದ್ಯವನ್ನು ತಯಾರಿಸಲು ಬೇಕಾಗುವ ಸಾಮಾಗ್ರಿಗಳನ್ನು ತಾವೇ ತೆಗೆದುಕೊಂಡು ಹೋಗಿ ನಿಗಧಿತ ಸ್ಥಳ, ಸಮಯದಲ್ಲಿ ಖಾದ್ಯವನ್ನು ಅಲ್ಲಿಯೇ ತಯಾರಿಸಲು ಸಿದ್ಧರಾಗಿರಬೇಕು. ಹೆಚ್ಚಿನ ಮಾಹಿತಿಗೆ ಸಹಾಯಕ ಕೃಷಿ ನಿರ್ದೇಶಕರು, ವಿರಾಜಪೇಟೆ ಇವರ ಮೊಬೈಲ್ ಸಂಖ್ಯೆ ೮೨೭೭೯೨೯೪೫೬ ನ್ನು ಸಂಪರ್ಕಿಸಬಹುದು ಎಂದು ಚಂದ್ರಶೇಖರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net