

ಮಂಡ್ಯ: ಸಿರಿಧಾನ್ಯಗಳ ನಿರಂತರ ಬಳಕೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ವಿ.ಸಿ ಫಾರ್ಮ್ ವಲಯ ಕೃಷಿ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಎನ್.ಶಿವಕುಮಾರ್ ಅಭಿಪ್ರಾಯಿಸಿದರು.
ತಾಲೂಕಿನ ವಿ.ಸಿ ಫಾರ್ಮ್‌ನಲ್ಲಿ ಕೃಷಿ ವಿಜ್ಞಾನ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಿರಿಧಾನ್ಯಗಳ ಪಾಕ ಪ್ರದರ್ಶನದಲ್ಲಿ ಮಾತನಾಡಿದ ಅವರು, ಸಿರಿಧಾನ್ಯಗಳು ಹವಾಮಾನ ವೈಪರೀತ್ಯಗಳನ್ನು ಎದುರಿಸಿ ಬೆಳೆಯಬಲ್ಲ ಬೆಳೆಗಳಾಗಿವೆ. ಈ ಬೆಳೆಗಳಿಗೆ ಹೆಚ್ಚು ಒತ್ತು ನೀಡಿ ಬೆಳೆದು ದಿನನಿತ್ಯ ಆಹಾರದಲ್ಲಿ ಉಪಯೋಗಿಸಿದಾಗ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದರು.
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಎನ್.ಟಿ.ನರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಚಂಪಾಕುಮಾರಿ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಕಮಲಾಬಾಯಿ ಕೂಡಗಿ ಮಾತನಾಡಿದರು. ಗಾಣದಾಳು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪರಾಣಿ ಕಾರ್ಯಕ್ರಮ ಉದ್ಘಾಟಿಸಿದರು. ಡಾ.ಚಂದ್ರಕಲಾ ಹಣಗಿ, ಡಾ.ಅತೀಫ, ಅಪೂರ್ವ, ಸರಿತಾ ಮೌಲ್ಯಾಂಕನ ಮಾಡಿ ಉತ್ತಮಖಾದ್ಯ ಪ್ರದರ್ಶನ ಮಾಡಿದವರಿಗೆ ಪ್ರಶಸ್ತಿ ನೀಡಿದರು. ಸುಮಾರು 86 ರೈತ ಮಹಿಳೆಯರು ಭಾಗವಹಿಸಿದ್ದರು.