ಆಮಿಷಕ್ಕೆ ಒಳಗಾಗಿ ನಿವೇಶನ ಮಾರಬೇಡಿ

ane 5
ಆನೇಕಲ್ ಶ್ರೀರಾಮ ಕುಟೀರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ತಹಸೀಲ್ದಾರ್ ಶಶಿಧರ್ ಮಾಡಿಹಾಳ್, ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ಕೃಷಿ ಇಲಾಖೆ ಧನಂಜಯ್, ಬಿಇಒ ವೆಂಕಟೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಶಿವಣ್ಣ ಇದ್ದರು.
Published on

ವಿಜಯವಾಣಿ ಸುದ್ದಿಜಾಲ ಆನೇಕಲ್
ಹಕ್ಕುಪತ್ರಗಳನ್ನು ಪಡೆದಿರುವವರು ನಿವೇಶನಗಳನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕು ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.
ಪಟ್ಟಣದ ಶ್ರೀರಾಮ ಕುಟೀರದಲ್ಲಿ ಬೆಂಗಳೂರು ನಗರ ಜಿಲ್ಲಾ ಮತ್ತು ಜಿಪಂ ಸಹಯೋಗದಲ್ಲಿ ಆಯೋಜಿಸಿದ್ದ ಜನಸ್ಪಂದನ ಮತ್ತು ಸರ್ಕಾರದ ವಿವಿಧ ಯೋಜನೆಗಳ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ತಾಲೂಕಿನ ಪ್ರತಿಯೊಬ್ಬರಿಗೂ ಮೂಲಸೌಲಭ್ಯ ಸಿಗಬೇಕು. ಈ ಹಿನ್ನೆಲೆಯಲ್ಲಿ ಬಹುದಿನಗಳಿಂದ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದವರಲ್ಲಿ, 275 ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ. ಇದನ್ನು ಸಂರಕ್ಷಿಸಿಕೊಳ್ಳಬೇಕು. ಆಸೆ, ಆಮಿಷಗಳಿಗೆ ಒಳಗಾಗಿ ನಿವೇಶನಗಳನ್ನು ಮಾರಿಕೊಳ್ಳಬಾರದು ಎಂದು ಮನವಿ ಮಾಡಿದರು.
ವಿವಿಧ ಇಲಾಖೆಗಳಿಂದ ಆಗಮಿಸಿದ್ದ ಅಧಿಕಾರಿಗಳಿಗೆ ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಿದರು.
ರೈತರಿಗೆ ಕೃಷಿ ಇಲಾಖೆಯಲ್ಲಿ ದೊರೆಯುವ ಸವಲತ್ತುಗಳಾದ ರೋಟೋವೇಟರ್ ವಿತರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕವಿತಾ, ಆನೇಕಲ್ ಪುರಸಭೆ ಮಾಜಿ ಅಧ್ಯಕ್ಷ ಪದ್ಮನಾಭ, ಪುರಸಭಾ ಅಧ್ಯಕ್ಷೆ ಸುಧಾ ನಿರಂಜನ್, ಉಪಾಧ್ಯಕ್ಷೆ ಭುವನಾ ದಿನೇಶ್, ಸದಸ್ಯರಾದ ರಾಜೇಂದ್ರ ಪ್ರಸಾದ್, ಸುರೇಶ್, ಪ್ರಕಾಶ್, ಮಹಂತೇಶ್, ಕವಿತಾ ಅಶ್ವತ್ಥನಾರಾಯಣ್, ಶಾಂತಿಪುರ ಪಂಚಾಯಿತಿ ಅಧ್ಯಕ್ಷ ಮದನ್, ಆನೇಕಲ್ ಪುರಸಭೆ ಸಿಇಒ ಅಮರನಾಥ್, ಬೊಮ್ಮಸಂದ್ರ ಪುರಸಭೆ ಸಿಇಒ ರಾಜೇಂದ್ರ, ಹೆಬ್ಬಗೋಡಿ ನಗರಸಭೆ ಸಿಇಒ ನರಸಿಂಹಮೂರ್ತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net