ವಿದ್ಯಾವರ್ಧಕದ ಮಕ್ಕಳಿಗೆ ಪ್ರಮಾಣಪತ್ರ ವಿತರಣೆ

shirva
ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್​ ಗಾರ್ಟನ್​ನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಪ್ರದಾನಿಸಲಾಯಿತು.
Published on

ಶಿರ್ವ: ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್​ ಗಾರ್ಟನ್​ ವಿಭಾಗದಲ್ಲಿ 2024&25ನೇ ಶೈಕ್ಷಣಿಕ ವರ್ಷದ ಶಿಕ್ಷಣ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ಜರುಗಿತು.

ಮುಖ್ಯ ಅತಿಥಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಬಯೋಕೆಮಿಸ್ಟ್ರಿ ವಿಭಾಗದ ಅಸೋಸಿಯೆಟ್​ ಪೊಫೆಸರ್​ ಡಾ.ವಿಜೇತಾ ಶೆಣೈ ಬೆಳ್ಳೆ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.

ಶಿಕ್ಷಕಿ ಅನಿತಾ ಉಪಾಧ್ಯಾಯ ಮಾತನಾಡಿದರು. ವಿದ್ಯಾವರ್ಧಕ ಸಂದ ಆಡಳಿತಾಧಿಕಾರಿ ಪೊ.ವೈ.ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲೆ ಡಾ.ಸಹನಾ ಹೆಗ್ಡೆ ಸ್ವಾಗತಿಸಿದರು. ಉಪಪ್ರಾಂಶುಪಾಲೆ ನೀಶಾ ಶೆಟ್ಟಿ ಪ್ರಸ್ತಾವನೆಗೈದರು. ಸಂಧ್ಯಾರಾಣಿ ವಂದಿಸಿದರು. ಶ್ವೇತಾ ಪಾಲನ್​ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net