

ಉಡುಪಿ: ಸರ್ಕಾರಿ ಪ.ಪೂ. ಕಾಲೇಜು ಉಡುಪಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಳೆದ ಎರಡು ವರ್ಷದ ಎನ್ಎಸ್ಎಸ್ ಚಟುವಟಿಕೆ ಹಾಗೂ ವಿಶೇಷ ಕ್ಯಾಂಪ್ನಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಯಿತು.
ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಡಯಟ್ನ ಉಪ ಪ್ರಾಂಶುಪಾಲ ಡಾ.ಅಶೋಕ್ ಕಾಮತ್, ನಿವೃತ್ತ ಮುಖ್ಯೋಪಾಧ್ಯಾಯಿನಿ ಕಲ್ಯಾಣಿ ಪೈ, ಉಪನ್ಯಾಸಕರಾದ ಕೃಷ್ಣಾನಂದ, ಗ್ರೇಸಿ ಕೆ.ಜೆ., ಕಿರಣ್ ರಾಜಾರಾಮ್ ವಜೆ ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳು ಇದ್ದರು.
ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಪರಮೇಶ್ವರ್ ಮೊಗವೀರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ನಾಗರಾಜ್ ಕಾರ್ಯಕ್ರಮ ನಿರ್ವಹಿಸಿದರು.