ಸೆಸ್ಕ್ ಅಧಿಕಾರಿ ಲೋಕಾ ಬಲೆಗೆ

Arrest crime
Published on

ವಿದ್ಯುತ್ ಗುತ್ತಿಗೆದಾರರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕುಶಾಲನಗರದ ಸೆಸ್ಕ್ ಸಹಾಯಕ ಕಾರ್ಯಪಾಲಕ ಅಭಿಯಂತರ ಅಶೋಕ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ವಿದ್ಯುತ್ ಗುತ್ತಿಗೆದಾರ ಪ್ರತಾಪ್ ಎಂಬುವರು ಕುಶಾಲನಗರದಲ್ಲಿ ಎಲೆಕ್ಟ್ರಿಕಲ್ ವಾಹನಗಳ ಚಾರ್ಜಿಂಗ್ ಸ್ಟೇಷನ್ ಸ್ಥಾಪನೆಗೆ ಮುಂದಾಗಿದ್ದರು. ಇದಕ್ಕೆ 49 ಕೆ.ವಿ. ವಿದ್ಯುತ್ ಒದಗಿಸಬೇಕಾದಲ್ಲಿ 5 ಲಕ್ಷ ರೂ. ಲಂಚ ನೀಡಬೇಕೆಂದು ಅಧಿಕಾರಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪ್ರತಾಪ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಮಡಿಕೇರಿ ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಕುಶಾಲನಗರ-ಮೈಸೂರು ಮಾರ್ಗಮಧ್ಯೆ 2 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net