ಹೆಬ್ಬಾಲೆಯಲ್ಲಿ ಸೆಸ್ಕ್ ಜಾಗೃತಿ ಕಾರ್ಯಕ್ರಮ

cesk
Published on

ಕುಶಾಲನಗರ:

ಮನೆ, ಪಂಪ್ ಸೆಟ್‌ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯುವುದು ಮತ್ತು ಅದರಿಂದ ಉಂಟಾಗುವ ಅನಾಹುತಗಳ ಕುರಿತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್) ಜಾಗೃತ ದಳದ ವತಿಯಿಂದ ಬುಧವಾರ ಹೆಬ್ಬಾಲೆ ಗ್ರಾಮದಲ್ಲಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ. ಜಗದೀಶ್, ಮನೆ ಅಥವಾ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕವನ್ನು ಅಕ್ರಮವಾಗಿ ಬಳಸಿದ್ದು ಕಂಡುಬAದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು. ಅಕ್ರಮವಾಗಿ ಸಂಪರ್ಕ ಪಡೆಯುವುದರಿಂದ ಉಂಟಾಗುವ ಅನಾಹುತಗಳ ಕುರಿತು ರೈತರು ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸಲು ಸೆಸ್ಕ್ ಜಾಗೃತ ದಳದ ವತಿಯಿಂದ ವಿವಿಧೆಡೆ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ.

ಗ್ರಾಮೀಣ ಪ್ರದೇಶದ ರೈತರು ಹಾಗೂ ಕಾಡಂಚಿನ ಪ್ರದೇಶಗಳಲ್ಲಿರುವ ಜನರು ತಮ್ಮ ಜಮೀನುಗಳ ಮೇಲೆ ಹಾದು ಹೋಗಿರುವ ಮಾರ್ಗದ ಮೂಲಕ ತಂತಿಬೇಲಿಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿದ್ದಾರೆ. ಇದರ ಪರಿಣಾಮ ಬಹುತೇಕ ಸಂದರ್ಭಗಳಲ್ಲಿ ಪ್ರಾಣ ಹಾನಿಯಾಗುವ ಘಟನೆಗಳೂ ನಡೆದಿವೆ. ಈ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಲವು ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದ್ದರಿಂದ ಮುಂದಿನ ದಿನಗಳಲ್ಲಿ ರೈತರು ತಮ್ಮ ಜಮೀನುಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿರುವುದು ಕಂಡುಬAದಲ್ಲಿ ಹಾಗೂ ಅದರಿಂದ ಮನುಷ್ಯ ಅಥವಾ ವನ್ಯಜೀವಿಗಳು ಮೃತಪಟ್ಟಲ್ಲಿ ಸಂಬAಧಪಟ್ಟವರನ್ನು ನೇರ ಹೊಣೆಗಾರರನ್ನಾಗಿ ಮಾಡಿ ವಿದ್ಯುತ್ ಕಾಯ್ದೆ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಸೆಸ್ಕ್ ಜಾಗೃತ ದಳದ ಅಧಿಕಾರಿಗಳು ನಿರಂತರವಾಗಿ ಗಸ್ತು ನಡೆಸುತ್ತಿರುತ್ತಾರೆ. ಈ ಸಂದರ್ಭದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬAದಲ್ಲಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬAದಲ್ಲಿ ಪೊಲೀಸ್ ನಿರೀಕ್ಷಕರು- 94495 98620 ಅಥವಾ ಸಹಾಯಕ ಕಾರ್ಯಪಾಲಕ ಎಂಜಿನಿಯರ್ 9448494902ಗೆ ದೂರು ನೀಡಬಹುದು ಎಂದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಅರುಣಾಕುಮಾರಿ, ಅಭಿವೃದ್ಧಿ ಅಧಿಕಾರಿ ಮೇದಪ್ಪ, ಸೆಸ್ಕ್ ನಿವೃತ್ತ ಎಂಜಿನಿಯರ್ ರಾಮಪ್ಪ, ಕುಶಾಲನಗರ ವಿಭಾಗದ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್, ಕೂಡಿಗೆ ಶಾಖಾಧಿಕಾರಿ ರಾಣಿ, ಸೆಸ್ಕ್ ಜಾಗೃತ ದಳದ ಪೊಲೀಸ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net