ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸುಗಮ

30-klr-7
Published on

ಕೋಲಾರ: ಜಿಲ್ಲೆಯ 17 ಕೇಂದ್ರಗಳಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಜೀವಶಾಸ್ತ್ರ ವಿಷಯಕ್ಕೆ 841 ಹಾಗೂ ಗಣಿತಕ್ಕೆ 419 ಮಂದಿ ಗೈರಾಗಿದ್ದಾರೆ.

ಬೆಳಗ್ಗಿನ ಅವಧಿಯಲ್ಲಿ ನಡೆದ ಜೀವಶಾಸ್ತ್ರ ವಿಷಯಕ್ಕೆ ನೊಂದಾಯಿಸಿದ 5320 ವಿದ್ಯಾರ್ಥಿಗಳಲ್ಲಿ 4479 ಮಂದಿ ಹಾಜರಾಗಿದ್ದು, 841 ಮಂದಿ ಗೈರಾಗಿದ್ದರು. ಮಧ್ಯಾಹ್ನದ ಅವಧಿಯಲ್ಲಿ ನಡೆದ ಗಣಿತ ವಿಷಯದ ಪರೀಕ್ಷೆಗೆ 4901 ಮಂದಿ ಹಾಜರಾಗುವ ಮೂಲಕ 419 ಮಂದಿ ಗೈರಾಗಿದ್ದಾರೆ ಎಂದು ಪಿಯು ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರದ ಕೊಠಡಿಗಳಿಗೆ ಸ್ಯಾನಿಟೈಸ್ ಮಾಡಲಾಗಿದ್ದು, ಬೆಳಗ್ಗೆ 10.30ಕ್ಕೆ ಪರೀಕ್ಷೆ ಇದ್ದರೂ ಗುಂಪು ಸೇರುವುದನ್ನು ತಡೆಯಲು ಬೆಳಗ್ಗೆ 8.30ಕ್ಕೆ ವಿದ್ಯಾರ್ಥಿಗಳು ಕೇಂದ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪರೀಕ್ಷಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಸ್ಯಾನಿಟೈಸ್ ಹಾಕಿ ಒಳ ಕಳುಹಿಸಲಾಗಿದೆ ಮತ್ತು ಮಾಸ್ಕ್ ಕಡ್ಡಾಯಗೊಳಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಕೇಂದ್ರಗಳಿಗೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಅಪರ ಜಿಲ್ಲಾಧಿಕಾರಿ ಬಿ.ಶಿವಸ್ವಾಮಿ ಮೆಥೋಡಿಸ್ಟ್, ಬಾಲಕರ ಹಾಗೂ ಬಾಲಕಿಯರ ಪಿಯು ಕಾಲೇಜು ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು. ಪ್ರಾಂಶುಪಾಲ ಎನ್.ಕೆ.ಮಂಜುನಾಥ್, ಇಲಾಖೆಯ ಗೋಪಿನಾಥ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net