ಯುಜಿಸಿಇಟಿ 2025 ಸೀಟು ಹಂಚಿಕೆ ಮಂಥನ

cet
Published on

ಕುಶಾಲನಗರ:

ಯುಜಿಸಿಇಟಿ 2025 ಸೀಟು ಹಂಚಿಕೆ ಮಂಥನ ಕಾರ್ಯಕ್ರಮ ಕುಶಾಲನಗರ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನಲ್ಲಿ ಶನಿವಾರ ನಡೆಯಿತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಹಯೋಗದಲ್ಲಿ ನಡೆಸಲಾದ ಕಾರ್ಯಕ್ರಮದಲ್ಲಿ ಸುಮಾರು 1000 ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡು ಪ್ರಯೋಜನ ಪಡೆದುಕೊಂಡರು.

ಈ ಮಾರ್ಗದರ್ಶನ ಶಿಬಿರದಲ್ಲಿ ಇ ಅಂಡ್ ಸಿ ವಿಭಾಗದ ಮುಖ್ಯಸ್ಥೆ ಡಾ. ಪವಿತ್ರ ವಿದ್ಯಾರ್ಥಿಗಳಿಗೆ ಮಂಥನ ಕಾರ್ಯಕ್ರಮ ನಡೆಸಿಕೊಟ್ಟರು. ಕಾಲೇಜಿನ ಪ್ರಾಚಾರ್ಯ ಡಾ. ಕೆ ಪರಶಿವಮೂರ್ತಿ ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಸಿಇಟಿ ಪ್ರಾಧಿಕಾರ ವತಿಯಿಂದ ಮೇಲ್ವಿಚಾರಕರಾಗಿ ಅಜಯ್ ಭಾಗವಹಿಸಿ ಪ್ರಶ್ನೋತ್ತರ ನಡೆಸಿಕೊಟ್ಟರು. ಪದವಿ ಪೂರ್ವ ಶಿಕ್ಷಣ ಇಲಾಖೆ ಪರವಾಗಿ ಪ್ರಾಚಾರ್ಯ ವಿಜಯ್ ಉಪಸ್ಥಿತರಿದ್ದರು.

ಕೊಡಗು ಮತ್ತು ನೆರೆ ಜಿಲ್ಲೆಯಲ್ಲಿ ವಿವಿಧ ಕಾಲೇಜುಗಳಲ್ಲಿ ಪಿಯೂಸಿ ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡಿದ್ದ ಸಿಇಟಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು, ಬೋಧಕ, ಬೋಧಕೇತರ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net