ಸಿಇಟಿ ಪರೀಕ್ಷೆ ಮುಂದೂಡಲು ಆಗ್ರಹ

HN 17-4
Published on

ವಿಜಯಪುರ: ಸಿಇಟಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ವತಿಯಿಂದ ಶುಕ್ರವಾರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಎಐಡಿಎಸ್‌ಒ ಜಿಲ್ಲಾಧ್ಯಕ್ಷೆ ಶೋಭಾ ಎಸ್. ಮಾತನಾಡಿ, ದೇಶಾದ್ಯಂತ ಕರೊನಾ ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿದ್ದು, ದೇಶದ ಜನ ಜೀವನವು ಅಸ್ತವ್ಯಸ್ತಗೊಂಡಿದೆ. ಕರೊನಾ ಮಹಾಮಾರಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರುವುದು ಸರ್ಕಾರದ ಪ್ರಮುಖ ಕೆಲಸವಾಗಿದೆ. ದೇಶದಾದ್ಯಂತ ರೈತರು, ಕಾರ್ಮಿಕರು, ಬಡ ಜನರು, ಮಧ್ಯಮ ವರ್ಗದವರು ಜೀವನವನ್ನು ನಡೆಸಲು ಹರಸಾಹಸ ಪಡುತ್ತಿರುವ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಪಿಯು ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯನ್ನು ಜು.30 ಮತ್ತು 31ರಂದು ನಡೆಸುವುದಾಗಿ ತೀರ್ಮಾನಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳನ್ನಷ್ಟೇ ಅಲ್ಲದೆ ಪಾಲಕರಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಆದ್ದರಿಂದ ಸಿಇಟಿ ಪರೀಕ್ಷೆಯನ್ನು ಮುಂದೂಡಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು. ಸಂಘಟನೆ ಜಿಲ್ಲಾ ಉಪಾಧ್ಯಕ್ಷೆ ಕಾವೇರಿ ರಜಪೂತ, ಸದಸ್ಯೆ ವಿದ್ಯಾಶ್ರೀ ಬಿರಾದಾರ ಮುಂತಾದವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net