ಸಿಇಟಿ ಪರೀಕ್ಷೆ ಸುಸೂತ್ರ

CET exam
Published on

ಹಾವೇರಿ: ನಗರದ ಒಂಭತ್ತು ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯಾವುದೇ ಗೊಂದಲವಿಲ್ಲದೇ ಸುಸೂತ್ರವಾಗಿ ಜರುಗಿತು.
ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೇಂಟ್ ಆನ್ಸ್ ಪದವಿ ಪೂರ್ವ ಕಾಲೇಜು, ಚನಬಸಪ್ಪ ಮಾಗಾವಿ ಪ್ರೌಢಶಾಲೆ, ಜಿ.ಎಚ್. ಕಾಲೇಜು, ಹುಕ್ಕೇರಿಮಠ ಎಸ್.ಎಸ್. ಪದವಿಪೂರ್ವ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶನಿವಾರ ನಡೆದ ಜೀವಶಾಸ್ತ್ರ ಪರೀಕ್ಷೆಗೆ 3,944 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 3,723 ಹಾಜರಾಗಿದ್ದು, 221 ವಿದ್ಯಾರ್ಥಿಗಳು ಗೈರಾಗಿದ್ದರು. ಗಣಿತ ವಿಷಯದ ಪರೀಕ್ಷೆಗೆ 9,344 ವಿದ್ಯಾರ್ಥಿಗಳ ಪೈಕಿ 3,790 ವಿದ್ಯಾರ್ಥಿಗಳು ಹಾಜರಾಗಿದ್ದು, 154 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಮೇ 21ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ವಿಷಯದ ಪರೀಕ್ಷೆಗಳು ನಡೆಯಲಿವೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಉಮೇಶಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net