ಮೈಸೂರಿನಲ್ಲಿ ಎಟಿಎಂಇ ಕಾಲೇಜಿನಿಂದ ಸಿಇಟಿ ಮಾರ್ಗದರ್ಶನ

CET
Published on

ಮೈಸೂರು: ನಗರದ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ನಗರದ ಸರಸ್ವತಿಪುರಂ ಅಗ್ನಿಶಾಮಕ ದಳ ಕಚೇರಿಯ ಬಳಿಯಎಟಿಎಂಇ ಕೇಂದ್ರದಲ್ಲಿ ಜೂ.1 ರಿಂದ 30ರವರೆಗೆ ಸಿಇಟಿ ಬರೆದಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಆಡಳಿತಾಧಿಕಾರಿ ಡಾ. ಸಚ್ಚಿದಾನಂದಮೂರ್ತಿ ತಿಳಿಸಿದರು.

2023-24ನೇ ಸಾಲಿನಲ್ಲಿ ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆದಿರುವ ವಿದ್ಯಾರ್ಥಿಗಳಿಗೆ ಲಭ್ಯವಿರುವ ಹಾಗೂ ಬೇಡಿಕೆಯ ಕೋರ್ಸ್‌ಗಳ ಬಗ್ಗೆ ಮಾಹಿತಿ ನೀಡಲಾಗುವುದು. ಇಂಜಿನಿಯರಿಂಗ್ ಕೋರ್ಸ್ ಅನ್ನು ಯಾವ ರೀತಿ ಆಯ್ಕೆ ಮಾಡಿಕೊಳ್ಳಬೇಕು? ಪ್ರವೇಶ ಪ್ರಕ್ರಿಯೆ ವಿವರ, ಪ್ರವೇಶ ಪಡೆಯಲು ಯಾವೆಲ್ಲ ದಾಖಲೆಗಳು ಅವಶ್ಯಕ, ಕೆಇಎ ಪೋರ್ಟಲ್‌ನಲ್ಲಿ ವಿವಿಧ ಕೋರ್ಸ್‌ಗಳನ್ನು ಆಯ್ಕೆ ಮಾಡುವ ವಿಧಾನ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು. ಮಾಹಿತಿಗೆ ಡಾ.ಎಲ್. ಯತೀಶ್ (ಮೊ:9902238768) ಸಂಪರ್ಕಿಸಬಹುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net