ನಾಳೆಯಿಂದ ಸಿಇಟಿ, ನೀಟ್ ಉಚಿತ ಕಾರ್ಯಾಗಾರ

CET exam
Published on

ವಿರಾಜಪೇಟೆ: ಚಾಣಕ್ಯ ಕೋಚಿಂಗ್ ಸೆಂಟರ್ ವತಿಯಿಂದ ಮಾ.23, 24 ರಂದು ಸಿಇಟಿ, ಜೆಇಇ ಹಾಗೂ ನೀಟ್ ಪರೀಕ್ಷೆ ಕುರಿತು ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಚಾಣಕ್ಯ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷೆ ಕವಿತಾ ತಿಳಿಸಿದ್ದಾರೆ.

ಮಾ.23 ರಂದು ಬೆಳಗ್ಗೆ 9 ಕ್ಕೆ ವಿರಾಜಪೇಟೆಯ ಜೈನರ ಬೀದಿಯಲ್ಲಿನ ಚಾಣಕ್ಯ ಕೋಚಿಂಗ್ ಸೆಂಟರ್‌ನಲ್ಲಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗುವುದು. ಕಾರ್ಯಾಗಾರವನ್ನು ಮಂಗಳೂರಿನ ಖ್ಯಾತ ಗಣಿತ ಶಾಸ್ತ್ರಜ್ಞ ಹಾಗೂ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥ ಡಾ.ಪ್ರಶಾಂತ್ ರಾವ್ ನಡೆಸಿಕೊಡಲಿದ್ದಾರೆ.

24 ರಂದು ಮೈಸೂರಿನ ಚಂದನ್ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಸಿಇಟಿ, ಜೆಇಇ ಹಾಗೂ ನೀಟ್ ಪರೀಕ್ಷಾರ್ಥಿಗಳಿಗೆ ಒಂದು ತಿಂಗಳ ಅವಧಿಯ ತರಬೇತಿ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊ: 8277496007 / 9480085541 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net