ಏ.16ರಿಂದ ಸಿಇಟಿ ಪರೀಕ್ಷೆ; ಉಡುಪಿ ಜಿಲ್ಲೆಯಲ್ಲಿ 23 ಕೇಂದ್ರ

UDP-7-7-CETmeeting
Published on

ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮಾಹಿತಿ

ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ

ವಿಜಯವಾಣಿ ಸುದ್ದಿಜಾಲ ಉಡುಪಿ

ವಿವಿಧ ಪದವಿಗಳಿಗಾಗಿ ರಾಜ್ಯಾದ್ಯಂತ ಏ.16 ಮತ್ತು 17ರಂದು ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ. ಯಾವುದೇ ಲೋಪವಾಗದಂತೆ ಹಾಗೂ ಪಾವಿತ್ರ್ಯತೆ ಕಾಪಾಡಿಕೊಂಡು ಪರೀಕ್ಷೆ ನಡೆಸಬೇಕು. ಜಿಲ್ಲೆಯ 23 ಕೇಂದ್ರಗಳಲ್ಲಿ ಪರೀೆ ನಡೆಯಲಿದ್ದು, 8,089 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾಹಿತಿ ನೀಡಿದರು.

CET Exam 4
ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್​ ವಿಡಿಯೋ ಸಭಾಂಗಣದಲ್ಲಿ ಏ.7ರಂದು ಆಯೋಜಿಸಿದ್ದ 2025ನೇ ಸಾಲಿನ ಸಿಇಟಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಪೊಲೀಸ್​ ಭದ್ರತೆ ನೀಡಿ

ಉಡುಪಿಯಲ್ಲಿ 12 ಪರೀಕ್ಷಾ ಕೇಂದ್ರ, ಕಾರ್ಕಳ 5 ಹಾಗೂ ಕುಂದಾಪುರದಲ್ಲಿ 6 ಕೇಂದ್ರದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ಗೊಂದಲವಾಗದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಪ್ರಶ್ನೆ ಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿಟ್ಟು ಸೂಕ್ತ ಪೊಲೀಸ್​ ಭದ್ರತೆ ಒದಗಿಸಬೇಕು. ಸಿಸಿಟಿವಿ ವ್ಯವಸ್ಥೆ ಅಳವಡಿಸಬೇಕು. ಪ್ರಶ್ನೆ ಪತ್ರಿಕೆ ವಿತರಣೆಗೆ ನೇಮಿಸಿರುವ ತಾಲೂಕುಗಳ ತಹಸೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ಸದಸ್ಯರ ತಂಡಗಳು ಪೊಲೀಸ್​ ಭದ್ರತೆಯಲ್ಲೇ ಆಯಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆ ತಲುಪಿಸಬೇಕೆಂದು ಸೂಚಿಸಿದರು.

ಸೂಕ್ತ ವ್ಯವಸ್ಥೆಯಿರಲಿ

CET Exam 1
ಪ್ರತಿ ಪರೀಕ್ಷಾ ಕೇಂದ್ರಕ್ಕೂ ವೀಕ್ಷಕರು, ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗುವುದು. ಎಲ್ಲ ಕೇಂದ್ರಗಳಿಗೂ ಸಿಸಿ ಕ್ಯಾಮರಾ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶ ನಿಷೇಧಿತ ಸ್ಥಳವೆಂದು ಘೋಷಿಸಿ, ಪೊಲೀಸ್​ ಇಲಾಖೆ ಭದ್ರತೆ ನೀಡಬೇಕು. ಎಲ್ಲ ಕೇಂದ್ರಗಳಿಗೂ ಆರೋಗ್ಯ ಸಹಾಯಕರು, ಗಡಿಯಾರ, ಕುಡಿಯುವ ನೀರು, ನಿರಂತರ ವಿದ್ಯುತ್​ ಸಂಪರ್ಕ ಇರುವಂತೆ ವ್ಯವಸ್ಥೆ ಮಾಡಲು ಸಂಬಂಧಿತ ಇಲಾಖೆ ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದರು.

ಸಭೆಯಲ್ಲಿ ಜಿಪಂ ಸಿಇಒ ಪ್ರತೀಕ ಬಾಯಲ್​, ಜಿಪಂ ಉಪ ಕಾರ್ಯದರ್ಶಿ ಶ್ರೀನಿವಾಸ ರಾವ್​, ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಕಾಲೇಜುಗಳ ಪ್ರಾಂಶುಪಾಲರು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್​, ಮೊಬೈಲ್​ ಸೇರಿದಂತೆ ಇಲೆಕ್ಟ್ರಾನಿಕ್​ ಉಪಕರಣ ತರುವಂತಿಲ್ಲ. ಆಭರಣ ಧರಿಸುವುದನ್ನೂ ನಿಷೇಧಿಸಲಾಗಿದೆ. ಸಮಯಕ್ಕಿಂತ ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರಕ್ಕೆ ಹಾಜರಾಗಬೇಕು. ಪ್ರವೇಶ ಪತ್ರದೊಂದಿಗೆ ಪ್ರಾಧಿಕಾರ ಸೂಚಿತ ಯಾವುದಾದರೊಂದು ಅಧಿಕೃತ ಗುರುತಿನ ಚೀಟಿ ತರಬೇಕು. | ಡಾ. ಕೆ.ವಿದ್ಯಾಕುಮಾರಿ. ಜಿಲ್ಲಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net