ಸಮುದಾಯ ಆರೋಗ್ಯ ಕೇಂದ್ರ ಸೀಲ್‌ಡೌನ್

CDN 28-1
Published on

ಚಡಚಣ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಐವರು ಸಿಬ್ಬಂದಿಗೆ ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜು.28 ರಿಂದ 48 ಗಂಟೆಗಳ ಕಾಲ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರವನ್ನು ಸೀಲ್‌ಡೌನ್ ಮಾಡಲಾಗಿದೆ.
ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಇನ್ನುಳಿದ ಸಿಬ್ಬಂದಿಗೂ ಕರೊನಾ ಪರೀಕ್ಷೆ ಮಾಡಿಸಲಾಗಿದ್ದು, ಅವರೆಲ್ಲರ ರಿಪೋರ್ಟ್ ನೆಗೆಟಿವ್ ಬಂದಿದೆ. ಸೋಂಕಿತರ ನೇರ ಸಂಪರ್ಕಕ್ಕೆ ಬಂದವರ ಗಂಟಲು ದ್ರವ ಪರೀಕ್ಷೆ ಮಾಡಲಾಗುವುದು ಎಂದು ವೈದ್ಯಾಧಿಕಾರಿ ಡಾ.ಸಂಗೀತಾ ಆಜೂರ ತಿಳಿಸಿದ್ದಾರೆ.

ಈಗಾಗಲೇ ಸಮುದಾಯ ಆರೋಗ್ಯ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಗಿದ್ದು, 48 ಗಂಟೆಗಳ ನಂತರ ಮತ್ತೊಮ್ಮೆ ಸ್ಯಾನಿಟೈಸ್ ಮಾಡಲಾಗುವುದು ಎಂದು ಹೇಳಿದ ಅವರು, ಸದ್ಯ ಹೊರ ಹಾಗೂ ಒಳ ರೋಗಿಗಳಿಗೆ ಆಸ್ಪತ್ರೆಗೆ ಬರುವುದನ್ನು ನಿರ್ಬಂಧಿಸಲಾಗಿದೆ. ಆದರೆ, ತುರ್ತು ರೋಗಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು ಎಂದವರು ಹೇಳಿದರು.
ಚಡಚಣ ತಾಲೂಕಿನಲ್ಲಿ ಕರೊನಾ ಪ್ರಾರಂಭವಾದಾಗಿನಿಂದ ಇಂದಿನ ವರೆಗೆ ಸೀಲ್‌ಡೌನ್ ಆದ ಏಕೈಕ ಸರ್ಕಾರಿ ಕಟ್ಟಡ ಇದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net