

ಉಡುಪಿ: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಕೆಎಂಸಿ ಆಸ್ಪತ್ರೆ ಮಹಿಳಾ ಸಿಬ್ಬಂದಿ ಹಿಂಬಾಲಿಸಿ ಮಾಂಗಲ್ಯ ಸರ ಸುಲಿಗೆ ಮಾಡಿಕೊಂಡು ಹೋದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶ್ವಾನದಳ ನೀಡಿದ ಸುಳಿವನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಮಣಿಪಾಲ ಸರಳಬೆಟ್ಟು ನಿವಾಸಿ ಸಂತೋಷ್( 29 ) ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ 45 ಗ್ರಾಂ ತೂಕದ ಸುಮಾರು 3.5 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಂಗ ಬಂದನಕ್ಕೆ ಒಪ್ಪಿಸಲಾಗಿದೆ.