ಚಾಕು ತೋರಿಸಿ ಚಿನ್ನದ ಸರ ಎಗರಿಸಿ ಪರಾರಿಯಾದ ಕಳ್ಳ; ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

Untitled 1
Published on

ದೊಡ್ಡಬಳ್ಳಾಪುರ: ಸರಗಳ್ಳನೊಬ್ಬ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದರೂ, ಸಾರ್ವಜನಿಕರು ಬೆನ್ನಟ್ಟಿ ಹಿಡಿದು ಕಂಬಕ್ಕೆ ಕಟ್ಟಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗ್ರಾಮದ ಭ್ರಮಾರಂಬಿಕೆ ಎಂಬವರು ತಮ್ಮ ಅಂಗಡಿಯಲ್ಲಿ ವ್ಯಾಪಾರನಿರತರಾಗಿದ್ದಾಗ ನುಗ್ಗಿದ ಸರಗಳ್ಳ, ಚೂರಿ ತೋರಿ ಬೆದರಿಸಿ ಚಿನ್ನದ ಸರವನ್ನು ಕಿತ್ತುಕೊಂಡು ಕಾಲ್ಕಿತ್ತಿದ್ದಾನೆ. ತಕ್ಷಣ ಆಕೆ ಜೋರಾಗಿ ಕಿರುಚಿಕೊಂಡಿದ್ದು, ಸ್ಥಳೀಯರು ಆತನನ್ನು ಬೆನ್ನಟ್ಟಿಕೊಂಡು ಹೋಗಿದ್ದಾರೆ.

ಸ್ವಲ್ಪದೂರ ಆತನನ್ನು ಬೆನ್ನಟ್ಟಿಕೊಂಡು ಹೋದ ಸಾರ್ವಜನಿಕರು, ಕಳ್ಳನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆತನಿಗೆ ಥಳಿಸಿ ಕಂಬಕ್ಕೆ ಕಟ್ಟಿ ಹಾಕಿ, ಕದ್ದುಕೊಂಡಿದ್ದ ಸರವನ್ನು ಮಹಿಳೆಗೆ ಮರಳಿಸಿದ್ದಾರೆ. ನಂತರ ದೊಡ್ಡಬಳ್ಳಾಪುರ ಪೊಲೀಸರಿಗೆ ಕರೆ ಮಾಡಿದ್ದು, ಅವರು ಸ್ಥಳಕ್ಕೆ ಬಂದು ಕಳ್ಳನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net