ಎಎಸ್​ಐ ಪತ್ನಿಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾದ್ರು ಸರಗಳ್ಳರು!

chain theft
Published on

ಬೆಂಗಳೂರು: ವಾಯುವಿಹಾರಕ್ಕೆ ತೆರಳಿದ್ದ ಎಎಸ್​ಐ ಪತ್ನಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿರುವ ದುಷ್ಕರ್ವಿುಗಳು, ಚಿನ್ನದಸರ ದೋಚಿ ಪರಾರಿಯಾಗಿದ್ದಾರೆ. ಸಿದ್ದಾಪುರ ನಿವಾಸಿ ಸುಶೀಲಮ್ಮ ಈ ಬಗ್ಗೆ ದೂರು ನೀಡಿದ್ದು, ಅಪರಿಚಿತರ ವಿರುದ್ಧ ವರ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೈಟ್​ಫೀಲ್ಡ್​ನ ಸಿದ್ದಾಪುರದಲ್ಲಿ ನೆಲೆಸಿರುವ ಸುಶೀಲಮ್ಮ ಗೃಹಿಣಿಯಾಗಿದ್ದು, ಪತಿ ಮುನಿನಾರಾಯಣಪ್ಪ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಎಸ್​ಪಿ ಕಚೇರಿಯಲ್ಲಿ ಎಎಸ್​ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶುಕ್ರವಾರ ರಾತ್ರಿ 10 ಗಂಟೆಯಲ್ಲಿ ಸುಶೀಲಮ್ಮವಾಯುವಿಹಾರ ಮಾಡುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಬಂದಿದ್ದ ಇಬ್ಬರು ದುಷ್ಕರ್ವಿುಗಳು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿ, ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಆರೋಪಿಗಳ ಮುಖಚಹರೆ ಗುರುತು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net