ಜಿಲ್ಲೆಗೆ ಆಯೋಗದ ಅಧ್ಯಕ್ಷ ಭೇಟಿ

Published on

ಬಳ್ಳಾರಿ: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹಾಗೂ ನ್ಯಾಯಾಂಗ ಸದಸ್ಯ ಎಸ್.ಕೆ.ವಂಟಿಗೋಡಿ ಜ.08 ಮತ್ತು 09 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ಜ.08 ರಂದು ಸಂಜೆ ಆಗಮಿಸುವರು. ಬಳಿಕ ಜಿಂದಾಲ್‌ನ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಮಾಡುವರು. ಜ.9 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ೇಟಿ ನೀಡುವರು. 3.30 ಗಂಟೆಯಿಂದ ಸಂಜೆ 04.30 ಗಂಟೆಯವರೆಗೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಂವಾದ ಹಾಗೂ ಸಂಜೆ ಪತ್ರಿಕಾಗೋಷ್ಠಿ ನಡೆಸುವರು. ಬಳಿಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಆಪ್ತ ಕಾರ್ಯದರ್ಶಿ ಅರುಣ್ ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net