

ಎನ್.ಆರ್.ಪುರ: ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಲಿಲ್ಲಿಮಾತುಕುಟ್ಟಿ ಅವಿರೋಧವಾಗಿ ಆಯ್ಕೆಯಾದರು.
ಕಡಹಿನಬೈಲು ಗ್ರಾಪಂ ಅಧ್ಯಕ್ಷೆ ಅಶ್ವಿನಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಲಿಲ್ಲಿಮಾತುಕುಟ್ಟಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಬಿಸಿಎಂ ಇಲಾಖೆ ವಿಸ್ತರಣಾಧಿಕಾರಿ ಧರ್ಮರಾಜ್ ಲಿಲ್ಲಿಮಾತುಕುಟ್ಟಿ ಮಾತು ಅವರ ಅವಿರೋಧ ಆಯ್ಕೆ ಘೋಷಿಸಿದರು.
ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಶಾಸಕ ಟಿ.ಡಿ.ರಾಜೇಗೌಡರು ಈ ಭಾಗದ ಕೆರೆ ಅಚ್ಚುಕಟ್ಟುದಾರರ ಅನುಕೂಲಕ್ಕಾಗಿ ಕಡಹಿನಬೈಲು ಏತ ನೀರಾವರಿ ಯೋಜನೆಗೆ 15 ಕೋಟಿ ರೂ. ಅನುದಾನ ನೀಡಿದ್ದಾರೆ. ಇದರಿಂದ ಕೆರೆಗಳ ಅಭಿವೃದ್ಧಿಯಾಗಲಿದೆ. ಕಡಹಿನಬೈಲು ಗ್ರಾಪಂ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ಹಂಚಿಕೆಗೂ ಶಾಸಕರು ಶ್ರಮಿಸಿದ್ದು, ಶೀಘ್ರದಲ್ಲೇ ನಿವೇಶನ ಹಂಚಿಕೆಯಾಗಲಿದೆ ನೂತನ ಅಧ್ಯಕ್ಷರು ಎಲ್ಲ ಸದಸ್ಯರ ಸಹಕಾರ ಪಡೆದು ಗ್ರಾಪಂ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಕೆ.ಎಂ.ಸುಂದರೇಶ್ ಮಾತನಾಡಿ, ಗ್ರಾಪಂ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ. ಅಧ್ಯಕ್ಷರು ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ಅಭಿವೃದ್ಧಿ ಕಾರ್ಯಗಳ ಕಡೆಗೆ ಗಮನಹರಿಸಬೇಕು ಎಂದರು.
ಗ್ರಾಪಂ ಉಪಾಧ್ಯಕ್ಷ ಸುನೀಲ್ ಕುಮಾರ್, ಸದಸ್ಯರಾದ ಚಂದ್ರಶೇಖರ್, ರವೀಂದ್ರ, ಅಶ್ವಿನಿ, ಶೈಲಾ ಮಹೇಶ್, ವಾಣಿ, ಪೂರ್ಣಿಮ, ಎಲ್ದೋಸ್, ಕರುಗುಂದ ನಂದೀಶ್, ಎ.ಎಲ್.ಮಹೇಶ್, ಬಿನು, ಪ್ರಶಾಂತ, ರಂಜು, ಜೇಮ್ಸ್,ಪರಮೇಶ್, ದೇವಂತ್‌ರಾಜ್, ಯೋಗೀಶ್ ಇದ್ದರು.