ಮಂಡಲ ಅಧ್ಯಕ್ಷರ ಆಯ್ಕೆಗೆ ಗೊಂದಲ ಸೃಷ್ಟಿ ಸರಿಯಲ್ಲ - ಬಿಜೆಪಿ ರಾಜ್ಯ ಕಾರ‌್ಯಕಾರಿಣಿ ಸದಸ್ಯ ಕೊಲ್ಲಾ ಶೇಷಗಿರಿರಾವ್ ಹೇಳಿಕೆ

Kolla Sheshagirirao
Published on

ಸಿಂಧನೂರು: ಬಿಜೆಪಿ ಮಂಡಲ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಗೊಂದಲ ಸೃಷ್ಟಿಸುವುದರಲ್ಲಿ ಅರ್ಥವಿಲ್ಲ, ಆಯ್ಕೆಯಲ್ಲಿ ಯಾವುದೇ ರೀತಿಯಲ್ಲಿ ನನ್ನ ಪಾತ್ರವಿಲ್ಲವೆಂದು ಬಿಜೆಪಿ ರಾಜ್ಯ ಕಾರ‌್ಯಕಾರಿಣಿ ಸದಸ್ಯ ಕೊಲ್ಲಾ ಶೇಷಗಿರಿರಾವ್ ತಿಳಿಸಿದ್ದಾರೆ.

ಪಕ್ಷದಲ್ಲಿ ಮಂಡಲ ಅಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾಧಿಕಾರಿ ನೇಮಕಗೊಂಡಿರುತ್ತಾರೆ. ಚುನಾವಣಾಧಿಕಾರಿಗಳೊಂದಿಗೆ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳ ಜತೆ ಚರ್ಚಿಸಿ, ಮಂಡಲದಲ್ಲಿ ಪ್ರತಿಯೊಬ್ಬರ ಅಭಿಪ್ರಾಯ ಸಂಗ್ರಹಿಸಿ ಮಂಡಲ ಅಧ್ಯಕ್ಷರ ನೇಮಕ ಮಾಡಿರುತ್ತಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳಿಲ್ಲ.

2003ರಲ್ಲಿ ಬಿಜೆಪಿ ಕಾರ್ಯಕರ್ತನಾಗಿ ಸೇರ್ಪಡೆಯಾದ ನಂತರ ಪಕ್ಷದಲ್ಲಿ ನನ್ನ ಸೇವೆ ಗುರುತಿಸಿ 2004 ರಿಂದ 2 ಅವಧಿಗೆ ತಮ್ಮನ್ನು ಕನಕಗಿರಿ ಮಂಡಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿತು. ಅಲ್ಲಿಂದ ಈವರೆಗೆ ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ ಅವಿತರವಾಗಿ ಶ್ರಮಿಸಿದ್ದೇನೆ. ಆದರೆ, ಕೆಲ ವಿಷಪೂರಿತ ಮನಸ್ಸುಗಳು ನನ್ನ ಬಗ್ಗೆ ಹಾಗೂ ಪಕ್ಷದ ಹಿರಿಯ ಮುಖಂಡರ ಬಗ್ಗೆ ತಪ್ಪಾಗಿ ಬಿಂಬಿಸಲು ಹೊರಟಿದ್ದಾರೆ. ಕಾರ್ಯಕರ್ತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ನಾನು ಜಾತಿ ರಾಜಕಾರಣ ಮಾಡಿಲ್ಲ, ಮಾಡುವವರಿಗೆ ತಲೆ ಬಾಗಲ್ಲ. ಕೊಪ್ಪಳ, ರಾಯಚೂರು ಜಿಲ್ಲೆಯಲ್ಲಿ ನನ್ನ ಸೇವೆ ಗುರುತಿಸಿ ಪಕ್ಷದ ವರಿಷ್ಠರು ಮತ್ತೊಮ್ಮೆ ಸಿಂಧನೂರಿನಲ್ಲಿ ಪಕ್ಷ ಸಂಘಟಿಸುವ ಹೊಣೆ ನೀಡಿದ್ದಾರೆ. ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net