ಗುರುಪುರ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್

vajra dehi
Published on

ಮಂಗಳೂರು : ಬಿಜೆಪಿ ಟಿಕೆಟ್ ಆಮಿಷವೊಡ್ಡಿ ಉದ್ಯಮಿಯೋರ್ವರಿಂದ ಚೈತ್ರಾ ಮತ್ತು ಇತರರು ಹಣ ಪಡೆದು ವಂಚಿಸಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರಿಗೆ ನೋಟಿಸ್ ನೀಡಿದ್ದಾರೆ.


ಬೆಂಗಳೂರು ಸಿಸಿಬಿ ಎಸಿಪಿ ರೀನಾ ಸುವರ್ಣ ಅವರು ನೋಟಿಸ್ ಜಾರಿ ಮಾಡಿ, ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
‘ವಂಚನೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಸಿಸಿಬಿಯವರಿಂದ ನೋಟಿಸ್ ಬಂದಿದೆ. ವಿಚಾರಣೆಗೆ ಹಾಜರಾಗುತ್ತೇನೆ’ ಎಂದು ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net