Bigg Boss ಮನೆಯಲ್ಲಿ ಹಿಂದುತ್ವವಾದಿ ಚೈತ್ರಾ ಕುಂದಾಪುರ! ಇಷ್ಟು ಚಿಕ್ಕವಯಸ್ಸಿಗೆ ಕೇಸ್, ಕಾಂಟ್ರವರ್ಸಿ...ಇಲ್ಲಿದೆ ಹಳೆ ಕಥೆ

Chaithra Kundapura (1)
Published on

ಬೆಂಗಳೂರು: ಫೈರ್ ಬ್ರ್ಯಾಂಡ್ ಭಾಷಣಗಾರ್ತಿಯಾಗಿರುವ ಚೈತ್ರಾ ಕುಂದಾಪುರ ( chaithra kundapura )  ಅವರು ತಮ್ಮದೇ ಆಗಿರುವ ಮಾತಿನ ಶೈಲಿ ಮೂಲಕವಾಗಿಯೇ ಎಲ್ಲರ ಗಮನ ಸೆಳೆದ ಯುವತಿ. ವಂಚನೆ ಆರೋಪದಲ್ಲಿ ಜೈಲು ಪಾರಾಗಿದ್ದ ಚೈತ್ರ ಅವರು ಇದೀಗ ಖಾಸಗಿವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್ ( Bigg Boss ) ಕಾರ್ಯಕ್ರಮದ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ. ಈಕೆ ಕುರಿತಾಗಿ ಕೆಲವು ಮಾಹಿತಿಯನ್ನು ನಾವು ಇಂದು ನಿಮಗೆ ತಿಳಿಸಿ ಕೊಡಲಿದ್ದೇವೆ.

ಭಾಷಣಗಾರ್ತಿಯಾಗಿರುವ ಚೈತ್ರಾ ಉಡುಪಿ ಜಿಲ್ಲೆಯ ಕುಂದಾಪುರದವರು. ಅವರಿಗೆ ಈಗ 28 ವರ್ಷ ಎನ್ನಲಾಗಿದೆ. ಕಾಲೇಜು ದಿನಗಳಿಂದ ಎಬಿವಿಪಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ, ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯೆ.

ಉಡುಪಿ ಜಿಲ್ಲೆಯ ಕುಂದಾರಪುರ ತೆಕ್ಕಟ್ಟೆಯಲ್ಲಿ ಪಿಯುಸಿಯವರೆಗೆ ವ್ಯಾಸಂಗ ಮಾಡಿದರು, ಕೊಣಾಜೆಯಲ್ಲಿ ಪದವಿ ಪೂರ್ಣಗೊಳಿಸಿದರು. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಜರ್ನಲಿಸಂ ಮತ್ತು ಮಾಸ್​ ಕಮ್ಯೂನಿಕೇಶನ್​​ ಪಧವಿ ಪಡೆದಿದ್ದಾರೆ.

ಚೈತ್ರಾ ಕುಂದಾಪುರ ವಿದ್ಯಾಭ್ಯಾಸ: ( chaithra kundapura ) 

ಉಡುಪಿಯ ಸ್ಪಂದನಾ ಹಾಗೂ ಮುಕ್ತ ನ್ಯೂಸ್ ಎಂಬ ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡಿದ್ದರು. ಜೊತೆಗೆ ಉದಯವಾಣಿ ಪತ್ರಿಕೆಯಲ್ಲೂ ಉಪಸಂಪಾದಕಿಯಾಗಿ ಕೆಲಸ ಮಾಡಿದ್ದರು. ಉಡುಪಿಯ ಅಜ್ಜರ ಕಾಡಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಪತ್ರಕರ್ತೆಯಾಗಿ, ನಿರೂಪಕಿಯಾಗಿ, ಭಾಷಣಕಾರರಾಗಿ ಇದ್ದರು.

ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭ:

ಯುವ ಮಾಧ್ಯಮ ರತ್ನ ಪ್ರಶಸ್ತಿ ಸಿಕ್ಕಿದೆ. ಇವರು ಲೇಖಕಿ ಕೂಡ ಆಗಿದ್ದು, ಪ್ರೇಮ ಪಾಶ ಎಂಬ ಪುಸ್ತಕ ಬರೆದಿದ್ದಾರೆ.

ಪ್ರಶಸ್ತಿ, ಪುರಸ್ಕಾರ:

ಚೈತ್ರಾಕುಂದಾಪುರ ಹೆಸರಿನಲ್ಲಿರುವ ವಿವಾದಗಳು:

2022ರಲ್ಲಿ ವಂಚನೆ ನಡೆದಿದ್ದು 2023ರಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು. ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್​ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಇದಾಗಿದೆ. ಈ ಪ್ರಕರಣದಲ್ಲಿ ಚೈತ್ರಾ ಬಂಧನಕ್ಕೆ ಒಳಗಾಗಿದ್ದರು.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಉದ್ಯಮಿ ಗೋವಿಂದ್ ಬಾಬು ಪೂಜಾರಿ ಅವರನ್ನು ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿತ್ತು. 5 ಕೋಟಿ ರೂಪಾಯಿ ವಂಚನೆ ಆರೋಪದಡಿ ಬಂಧಿಸಲಾಗಿತ್ತು. ಬಳಿಕ ಅವರನ್ನು ಬಿಡುಗಡೆ ಮಾಡಲಾಗಿತ್ತು.

2023ರ ಸೆಪ್ಟೆಂಬರ್​ನಲ್ಲಿ ಚೈತ್ರಾ ಬಂಧನವಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಚೈತ್ರಾ ಹಾಗೂ ಇತರ ಆರೋಪಿಗಳ ವಿರುದ್ಧ 800 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು. ಡಿಸೆಂಬರ್​ನಲ್ಲಿ ಇವರಿಗೆ ಜಾಮೀನು ಸಿಕ್ಕಿತ್ತು. ಈ ಪ್ರಕರಣ ಇನ್ನೂ ಕೋರ್ಟ್​ನಲ್ಲಿದೆ.

ಲವ್ ಜಿಹಾದ್​​, ಮತಾಂತರ, ಹಿಜಾಬ್​ ಬಗ್ಗೆ ಆಕ್ರೋಶಭರಿತ ಮಾತುಗಳನ್ನಾಡಿ ವಿವಾದಕ್ಕೆ ಸಿಲುಕಿದ್ದರು. ದ್ವೇಷ ಭಾಷಣ ಮಾಡುವ ಆರೋಪದ ಹಿನ್ನಲೆ ಚೈತ್ರಾ ಅವರು ಹಲವು ಪ್ರಕರಣಗಳು ದಾಖಲಾಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net